ಧಾರವಾಡ | ಕೆಲಸಕ್ಕಾಗಿ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ

Date:

Advertisements

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತಿ ಎದುರು ನರೇಗಾ ಕೆಲಸಕ್ಕಾಗಿ ಗ್ರಾಮೀಣ ಕೂಲಿ‌ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೆಲಸ ಕೊಡಿ, ಕೂಲಿ ಕೊಡಿ, ಇಲ್ಲದಿದ್ದರೆ ಖುರ್ಚಿ ಬಿಡಿ ಎಂದು ಘೋಷಣೆ ಕೂಗಿದ ಕೂಲಿ‌ ಕಾರ್ಮಿಕರು ಗ್ರಾಮೀಣ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ಮತ್ತು ಪಂಚಾಯತಿ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೂಲಿ ಕಾರ್ಮಿಕ ಮಹಿಳೆಯರು ಮಾತನಾಡಿ, ಕೆಲಸ ಕೇಳಿಕೊಂಡು ಪಂಚಾಯಿತಿ ಕಡೆಗೆ ಬಂದರೆ ಪಂಚಾಯಿತಿಯನ್ನು ಬಂದ್ ಮಾಡುತ್ತಾರೆ. ಪಿಡಿಒ ನಾವು ಬಂದ ತಕ್ಷಣ ಎದ್ದು ಹೋಗುತ್ತಾರೆ ಮತ್ತು ಎರಡು ಮೂರು ದಿನದ ಎನ್ಎಂಆರ್ ಮಾತ್ರ ಹಾಕಿಕೊಡುತ್ತಾರೆ. ವರ್ಷಕ್ಕೆ 100 ಅಥವಾ 150 ಹಾಜರಿ ಕೊಡದೆ 40, 50 ಹಾಜರಿಗಳನ್ನು ಮಾತ್ರ ಕೊಡುತ್ತಾರೆ ಎಂದು ಆರೋಪಿಸಿದರು. ಹೊಲಗಳು ಇಲ್ಲದ ನಾವುಗಳು ಬಡವರಾಗಿದ್ದು ನರೇಗಾ ಕೆಲಸವನ್ನು ನಂಬಿ ಕೊಂಡಿದ್ದೇವೆ. ನಮಗೆ ನೂರು ದಿನದ ಕೆಲಸ ಕೊಟ್ಟರೆ ಸಾಕು, ನಮ್ಮ ಕಡೆಯಿಂದ ಯಾವ ತಕರಾರೂ ತೆಗೆಯುವುದಿಲ್ಲ. ಕಳೆದ ಆರು ತಿಂಗಳಿಂದ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಈಗಲಾದರೂ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಈ ಕುರಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎ.ಎಚ್.ಮನಿಯಾರ್ ಮಾತನಾಡಿ, ಸುಮಾರು ದಿನಕ್ಕೆ 800 ಕೂಲಿ ಕಾರ್ಮಿಕರಿಗೆ ಕೆಲಸವನ್ನು ಕೊಡಲಾಗುತ್ತದೆ. ಈ ವರ್ಷ ಅತಿಯಾದ ಮಳೆಯಿಂದಾಗಿ ದೊಡ್ಡ ಕೆರೆಯಲ್ಲಿ ನೀರು ತುಂಬಿರುವ ಕಾರಣದಿಂದ ಕೆಲಸವನ್ನು ಕಡಿಮೆ ಪ್ರಮಾಣದಲ್ಲಿ ಕೊಡಲಾಗಿದೆ. ಕೆಲಸ ಕೇಳಿಕೊಂಡು ಬಂದ 6 ನಂಬರಿನ ಅರ್ಜಿಗಳನ್ನು ಅರಣ್ಯ ಇಲಾಖೆ ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ತಲುಪಿಸಲಾಗಿದೆ. ಕೆರೆ ತುಂಬಿರುವ ಕಾರಣ ಬೇರೆ ಕೆಲಸಕ್ಕೆ ಕ್ರಿಯಾಯೋಜನೆಯನ್ನು ಈಗಾಗಲೇ ತಾಲೂಕು ಪಂಚಾಯಿತಿಗೆ ಕಳಿಸಿದ್ದೇವೆ. ಇನ್ನುಳಿದ ಕಾಮಗಾರಿಗಳನ್ನು ನರೇಗಾ ಯೋಜನೆ ಅಡಿಯಲ್ಲಿ ಸೃಷ್ಟಿ ಮಾಡಿ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಲಾಗುವುದು ಎಂದು ಹೇಳಿದರು.

Advertisements

ಈ ವರದಿ ಓದಿದ್ದೀರಾ? ಮಂಗಳೂರು | ಡಿಸೆಂಬರ್ 21ರಿಂದ ಜನವರಿ 19 ರವರೆಗೆ ಮತ್ತೊಮ್ಮೆ’ ಕರಾವಳಿ ಉತ್ಸವ’

ಪ್ರತಿಭಟನೆಯಲ್ಲಿ ಸಂಗಮೇಶ್ವರ ಗ್ರಾಮದ ಕೂಲಿ ಕಾರ್ಮಿಕ ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X