ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements
  • ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ
  • ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಿರಿ

ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.

ನಾಡಿನ ಜನತೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೆ ಪದೆ ಅಲೆಯುವುದನ್ನು ತಪ್ಪಿಸಿ. ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಿ ಎಂದು ಸೂಚಿಸಿದ್ದಾರೆ.

ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಉಡುಗೊರೆ ನೀಡಬೇಕು. ಈ ಗುರಿ ಇಟ್ಟುಕೊಂಡು ಶ್ರದ್ದೆ, ಪ್ರಾಮಾಣಿಕತೆ ಹಾಗೂ ಚುರುಕಾಗಿ ಜವಾಬ್ದಾರಿ ನಿರ್ವಹಿಸಿ ಎಂದು ಎಲ್ಲಾ ಸಚಿವರಿಗೂ ಮನವರಿಕೆ ಮಾಡಿಸಿದ್ದಾರೆ.

Advertisements

ನಾವು ನೀಡಿರುವ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು.

ಈ ಸುದ್ದಿ ಓದಿದ್ದೀರಾ? ಕಲುಷಿತ ನೀರು ಸೇವನೆ ಘಟನೆ; ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನೀವೆಲ್ಲಾ ಸಕ್ರಿಯರಾಗಿ. ವಿರೋಧ ಪಕ್ಷದಲ್ಲಿದ್ದಾಗ ನಾವು ನಡೆಸಿದ ಹೋರಾಟದ ಫಲವಾಗಿ ಜನತೆ ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿ ನಮ್ಮ ಕೈ ಹಿಡಿದಿದ್ದಾರೆ. ಈಗ ನಾವು ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಜನಪರ ನಿಷ್ಠೆ ಮತ್ತು ಕೆಲಸಗಳ ಮೂಲಕ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ದಾಖಲಿಸಬೇಕಿದೆ ಎಂದು ಸಚಿವರಿಗೆ ಸೂಚಿಸಿದ್ದಾರೆ.

ಕೇಂದ್ರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಇದನ್ನು ನಾವು ಮರೆಯಬಾರದು. ಹೀಗಾಗಿ ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಬೇಕು. ಜಿಲ್ಲೆ, ತಾಲ್ಲೂಕು ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು ಎಂದು ಮುಖ್ಯಮಂತ್ರಿಗಳು ಎಲ್ಲಾ ಸಚಿವರಿಗೂ ಟಾರ್ಗೆಟ್ ನೀಡಿ ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

Download Eedina App Android / iOS

X