ರಾಯಚೂರು | ಸಮಸ್ಯೆಗಳೇ ಶಿಕ್ಷಣದಿಂದ ದೂರ ಉಳಿಯಲು ಕಾರಣವಾಗಬಾರದು : ಬಾಬರ್ ಅಲಿ

Date:

Advertisements

“ಕೌಟುಂಬಿಕ ಹಾಗೂ ಸಮಾಜಿಕ ಸಮಸ್ಯೆಗಳೇ ಶಾಲೆಯಿಂದ ದೂರ ಉಳಿಯಲು ಕಾರಣವಾಗಬಾರದು” ಎಂದು ಪ್ರಪಂಚದ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯ ಎಂಬ ಹೆಗ್ಗಳಿಕೆ ಪಾತ್ರರಾದ ಬಾಬರ ಅಲಿ ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷ ಗೃಹದಲ್ಲಿ ಉಪ ನಿರ್ದೇಶಕ ಶಾಲಾ ಶಿಕ್ಷಣ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಬಡತನ, ಅನಕ್ಷರತೆ ಹಾಗೂ ಪೋಷಕರ ಅಜ್ಞಾನದಿಂದ ಮಕ್ಕಳು ಶಿಕ್ಷಣದಿಂದ ದೂರು ಉಳಿಯುವ ಕಂಡು ಬರುತ್ತಿದೆ. ಬದುಕು ರೂಪಿಸುವ ಹಾಗೂ ಅನ್ನ ನೀಡುವ ಪ್ರಾಯೋಗಿಕ ಶಿಕ್ಷಣ ನೀಡುವ ವ್ಯವಸ್ಥೆಯಿಂದ ಆಗಬೇಕು ಅಂದಾಗ ಮಾತ್ರ ಎಲ್ಲರಿಗೂ ಶಿಕ್ಷಣ ಸಿಗಬಹುದು ಎಂದರು.

Advertisements

ಮಕ್ಕಳನ್ನು ಶಾಲೆಗೆ ಕರೆತರುವ ನಿಟ್ಟಿನಲ್ಲಿ ತಂದೆ ತಾಯಿಯರ ಸಹಕಾರದಿಂದ ಹಿಂದುಳಿದ ವರ್ಗಗಳ, ವಲಸೆ ಕಾರ್ಮಿಕರ, ಬೀದಿ ಬದಿಯ ವ್ಯಾಪಾರಿಗಳ ಹಾಗೂ ಶೋಷಿತ ಸಮುದಾಯದ ಮಕ್ಕಳನ್ನು ಶಾಲೆಗೆ ಸೇರಿಸುವ ಕೆಲಸ ಮಾಡಲಾಯಿತು ಎಂದು ತಿಳಿಸಿದರು.

ಸಮಸ್ಯೆಗಳೇ ಮಕ್ಕಳಿಗೆ ಶಾಲೆಯಿಂದ ದೂರು ಉಳಿಯುವುದಕ್ಕೆ ಅಡೆತಡೆ ಉಂಟಾಗಬಾರದು ಎಂಬ ಉದ್ದೇಶದಿಂದ ಮಕ್ಕಳು ಮೊದಲು ಶಾಲೆಯತ್ತ ಆಕರ್ಷಿತರಾಗಲಿ. ನಿತ್ಯ ಬರುವಂತೆ ರೂಢಿಗೊಳಿಸಿ ಆನಂತರವಷ್ಟೇ ಮಕ್ಕಳಿಗೆ ಕಲಿಕೆ ಒತ್ತು ನೀಡಿದರಾಯಿತು. ಮಕ್ಕಳ ಹಾಜರಾತಿಯೇ ಶಿಕ್ಷಣ ಮಟ್ಟ ಸುಧಾರಣೆಗೆ ಕಾರಣವಾಗಿದೆ ಎಂದು ತಮ್ಮ ಅನುಭವ ಹಂಚಿಕೊಂಡರು.

ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ 2009ರಲ್ಲಿ ತನ್ನ ಹದಿನಾರನೇ ವಯಸ್ಸಿನಲ್ಲಿ ವಿಶ್ವದ ಅತ್ಯಂತ ಕಿರಿಯ ಮುಖ್ಯ ಶಿಕ್ಷಕ ಎಂದು ಖ್ಯಾತರಾದ ಬಾಬರ್ ಅಲಿ 8 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ವಿಶ್ವಖ್ಯಾತಿ ಪಡೆದಿದ್ದಾರೆ. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ ,ಅವರ ಜೀವನಕ್ಕೆ ದಾರಿದೀಪವಾದ ಬಾಬರ್ ಅಲಿ ಅವರ ಜೀವನ ಸಾಧನೆಯನ್ನು ಶಿಕ್ಷಕರು ಅರಿತು ಪ್ರೇರಣೆ ಪಡೆದು ಮಕ್ಕಳ ಭವಿಷ್ಯ ರೂಪಿಸಬೇಕು ಎಂದು ಹೇಳಿದರು.

ಬಿಇಒ ಚಂದ್ರಶೇಖರ ಭಂಡಾರಿ, ಎನ್ ಬಿ.ರಂಗಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಬಾರಿ ಉಪ ನಿರ್ದೇಶಕ ಸೋಮಶೇಖರ ಹೊಕ್ರಾಣಿ, ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಸಂಚಾಲಕ ಸೈಯದ್ ಹಫಿಜುಲ್ಲಾ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X