ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಹಳೆಯದಾದ ಮತ್ತು ಕಳಪೆ ಕಾಮಗಾರಿಯಿಂದಾಗಿ ಕಟ್ಟಡಗಳು ಕುಸಿದು ಬೀಳುವುದು ಆಗ್ಗಾಗ್ಗೆ ವರದಿಯಾಗುತ್ತಿದೆ. ಇತ್ತೀಚೆಗೆ, ಹಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದು, 9 ಮಂದಿ ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಗರದಲ್ಲಿ ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ನಡೆಸುತ್ತಿದೆ.
ಅನಧಿಕೃತ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಬಿಬಿಎಂಪಿ ಅಧಿಕಾರಿಗಳು ಗುರುತಿಸುತ್ತಿದ್ದಾರೆ. ಅದರಂತೆ, ಚಿಕ್ಕಪೇಟೆಯಲ್ಲಿ 29 ಕಟ್ಟಡಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ನೆಲಸಮಗೊಳಿಸಲು ಮುಂದಾಗಿದ್ದಾರೆ.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ವಿವಿಪುರ, ವಿದ್ಯಾ ಪೀಠ ಹಾಗೂ ಹೊಂಬೇಗೌಡ ನಗರ ವಾರ್ಡ್‌ಗಳಲ್ಲಿ 29 ಕಟ್ಟಡಗಳನ್ನು ತೆರವುಗೊಳಿಸಲಾಗಿತ್ತದೆ ಕಟ್ಟಡಗಳ ಅಳತೆ ಮಾಡಿ, ದಾಖಲೆಗಳನ್ನು ಪಡೆದುಕೊಂಡು ಕಟ್ಟಡಗಳ ಮಾಲೀಕರಿಗೆ ನೋಡಿಸ್ ಕಳಿಸಲು ತಯಾರಿ ನಡೆಯುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಬಾಬುಸಪಾಳ್ಯದಲ್ಲಿ ನಡೆದ ಘಟನೆಯ ಕುರಿತು ತನಿಖೆ ನಡೆಸುತ್ತಿರುವ ಲೋಕಾಯುಕ್ತ, ಶಿಥಿಲಗೊಂಡಿರುವ ಕಟ್ಟಡಗಳ ಬಗ್ಗೆ ಬಿಬಿಎಂಪಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ, ಅನೇಕ ಅಧಿಕಾರಿಗಳು ತ್ವರಿತವಾಗಿ ಮತ್ತು ಯಾವುದೇ ಪ್ರಭಾವಕ್ಕೆ ಒಳಗಾಗದಂತೆ ಕೆಲಸ ಮಾಡುವಂತೆ ಬಿಬಿಎಂಪಿ ಉನ್ನತಾಧಿಕಾರಿಗಳು ಸೂಚನೆ ನೀಡಿದ್ದಾರೆ.