ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌ಗೆ ಅವಮಾನಿಸುವುದು ಫಾಸಿಸ್ಟ್ ಮನಸ್ಥಿತಿ: ವೆಲ್ಫೇರ್ ಪಾರ್ಟಿ

Date:

Advertisements

ಅಂಬೇಡ್ಕರ್ ಅವರ ಹೆಸರು ಹೆಚ್ಚು ಹೆಚ್ಚು ಬಾರಿ ಹೇಳುವುದು ವ್ಯಸನವಾಗಿದೆ ಎಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೃಹ ಸಚಿವ ಅಮಿತ್ ಶಾ ನಿಂದಿಸಿದ್ದಾರೆ. ಆ ಮೂಲಕ ತಮ್ಮ ಫ್ಯಾಸಿಸ್ಟ್ ಮನಸ್ಥಿತಿಯನ್ನು ಬಹಿರಂಗಪಡಿಸಿದ್ದಾರೆ ಎಂದು ವೆಲ್ಫೇರ್ ಪಾರ್ಟಿ ಆಫ್‌ ಕರ್ನಾಟಕದ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಂಬೇಡ್ಕರ್ ಹೆಸರು ಹೇಳುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಅಂಬೇಡ್ಕರ್ ಈ ದೇಶಕ್ಕೆ ಮಾದರಿ ಸಂವಿಧಾನ ರೂಪಿಸಿದವರು. ಹಿಂದುಳಿದ, ಅಲ್ಪಸಂಖ್ಯಾತರ ಧ್ವನಿ ಆಗಿದ್ದವರು. ಅವರ ಬಗ್ಗೆ ಇಷ್ಟು ಕೀಳು ಭಾವನೆ ಇಟ್ಟುಕೊಳ್ಳುವುದು ಈ ದೇಶದ ಗೃಹ ಮಂತ್ರಿಗೆ ಶೋಭೆಯಲ್ಲ” ಎಂದು ಕಿಡಿಕಾರಿದ್ದಾರೆ.

“ಅಂಬೇಡ್ಕರ್ ಹೆಸರು ಕೇಳಲು ಕೋಮುವ್ಯಸನಿಗಳಿಗೆ ಕರ್ಕಶವಾಗಬಹುದು. ಆದರೆ, ಇಲ್ಲಿನ ದಲಿತ, ಹಿಂದುಳಿದ, ದುರ್ಬಲ ವರ್ಗಗಳ ಹಕ್ಕುಗಳಿಗೆ ಹೋರಾಡಿದ ಮಹನೀಯರಾದ ಅಂಬೇಡ್ಕರ್ ಅವರ ಸೇವೆ ಸ್ಮರಣೀಯ. ಅಂಬೇಡ್ಕರ್ ಹೆಸರನ್ನು ನಾವು ಎಂದಿಗೂ ಸ್ಮರಿಸುತ್ತೇವೆ. ಅದು ನಿಮಗೆ (ಅಮಿತ್‌ ಶಾ) ವ್ಯಸನದಂತೆ ಕಂಡರೆ ಅದು ನಿಮ್ಮ ಮಾನಸಿಕ ಸಮಸ್ಯೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಅಂಬೇಡ್ಕರ್ ಅವರನ್ನು ನಿಂದಿಸುವ ಮೂಲಕ ಇಡೀ ದೇಶದ ನಾಗರಿಕರ ಮನಸಿಗೆ ಘಾಸಿಯುಂಟು ಮಾಡಿರುವ ಗೃಹಮಂತ್ರಿ ಅಮಿತ್ ಶಾ ಕೂಡಲೇ ಕ್ಷಮೆಯಾಚನೆ ಮಾಡಬೇಕು. ತಮ್ಮ ಹೇಳಿಕೆಗಳನ್ನು ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X