ಅಂಬೇಡ್ಕರ್ ಅವರನ್ನು ಅಪಮಾನಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಕರ್ನಾಟಕದ ಕಾಂಗ್ರೆಸ್ ಶಾಸಕರು, ಸಚಿವರು ಸುವರ್ಣಸೌಧದಲ್ಲಿ ಅಂಬೇಡ್ಕರ್ ಭಾವಚಿತ್ರ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಬಳಿಕ ಅಂಬೇಡ್ಕರ್ ಚಿತ್ರವನ್ನು ಟೇಬಲ್‌ಗಳಲ್ಲಿ ಇರಿಸಲಾಗಿದ್ದು, ಸದನದ ತುಂಬ ಅಂಬೇಡ್ಕರ್ ಚಿತ್ರಗಳು ಕಂಗೊಳಿಸಿವೆ.
ಅಂಬೇಡ್ಕರ್ ಅವರನ್ನು ಅಪಮಾನಿಸಿದ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಶಾಸಕರು ಘೋಷಣೆ ಕೂಗಿದ್ದಾರೆ. ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್ಸಿಗರು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರೆ, ಅಮಿತ್ ಶಾ ಅವರನ್ನು ಸಮರ್ಥಿಸಿಕೊಂಡ ಬಿಜೆಪಿ-ಜೆಡಿಎಸ್ ಶಾಸಕರು ಸದನದಿಂದ ಹೊರ ಹೋಗಿದ್ದಾರೆ. ಅಂಬೇಡ್ಕರ್ ವಿರುದ್ಧದ ಬಿಜೆಪಿ ನಿಲುವನ್ನು ಜೆಡಿಎಸ್ ಕೂಡ ಬೆಂಬಲಿಸಿದ್ದು, ಆಕ್ರೋಶಕ್ಕೆ ಗುರಿಯಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್, “ಎಲ್ಲ ಜಾತಿ ಸಮುದಾಯಗಳಲ್ಲಿ ಸಮಾನತೆಯಿಂದ ಇರಲೆಂದು ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದಾರೆ. ಅವರಿಗೆ ಇಡೀ ದೇಶ ಗೌರವ ಕೊಡುತ್ತದೆ. ಆದರೆ, ‘ನಾವು ಬಂದಿದ್ದೆ ಸಂವಿಧಾನ ಬದಲಾವಣೆ ಮಾಡೋಕೆ’ ಎಂದು ಬಿಜೆಪಿ ಹೇಳುತ್ತಿದೆ. ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಅವರು ಲಘುವಾಗಿ ಮಾತನಾಡಿದ್ದಾರೆ. ಅಮಿತ್ ಶಾ ಅವರು ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.