ಕಳೆದ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ, ಮಗನಿಗೆ ತಲಾ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹10 ಸಾವಿರ ದಂಡ ವಿಧಿಸಿ ಅಫಜಲಪುರದ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯ ಆದೇಶಿಸಿದೆ.
ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರದ ಸುನೀಲ್ ಗುತ್ತೇದಾರ ಅವರ ತಾಯಿ ವಿಜಯಲಕ್ಷ್ಮೀ ಗುತ್ತೇದಾರ ಶಿಕ್ಷೆಗೆ ಒಳಗಾದವರು.
ಚುನಾವಣೆ ವೇಳೆ ಸ್ಟೇಷನ್ ಗಾಣಗಾಪುರದಲ್ಲಿ ಅಬಕಾರಿ ನಿರೀಕ್ಷಕರು ದಾಳಿ ನಡೆಸಿದ್ದರು. ಅಕ್ರಮ ಮದ್ಯ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.ನ್ಯಾಯಾಧೀಶ ಅನೀಲ ಅಮಾಟೆ ಅವರು ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಅಬ್ಬಬ್ಬಾ! ಏನ್ ಚಳಿ ಅಂತೀರಾ…
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಜಯಶ್ರೀ ಪಿ. ಅವರು ವಾದವನ್ನು ಮಂಡಿಸಿದ್ದರು.