87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರು, ಜಾನಪದ ವಿದ್ವಾಂಸರು, ನಾಡೋಜ ಗೊ.ರು. ಚನ್ನಬಸಪ್ಪ ಅವರು ‘ಸಕ್ಕರೆ ನಾಡು ಜನಪದ ಬೀಡು’ ಮಂಡ್ಯಕ್ಕೆ ಆಗಮಿಸುತ್ತಿದ್ದಂತೆ ವೈಭವಯಾಗಿ ಸ್ವಾಗತಿಸಲಾಯಿತು.

ಸಮ್ಮೇಳನ ನಡೆಯಲಿರುವ ಸ್ಯಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಸಮೀಪ ಗೊ.ರು.ಚನ್ನಬಸಪ್ಪ ಅವರು ಆಗಮಿಸುತ್ತಿದ್ದಂತೆ ಪೂರ್ಣಕುಂಭದೊಂದಿಗೆ ನಾದಸ್ವರ, ಡೊಳ್ಳು ಕುಣಿತ, ಪೂಜಾ ಕುಣಿತ ಒಳಗೊಂಡಂತೆ ಜಾನಪದ ಕಲಾತಂಡಗಳಿಂದ ಬರಮಾಡಿಕೊಳ್ಳಲಾಯಿತು.
ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಸಮ್ಮೇಳನಾಧ್ಯಕ್ಷರಿಗೆ ಮೈಸೂರು ಮಲ್ಲಿಗೆ ಹಾರ, ಕನ್ನಡದ ಶಾಲು ಹಾಕಿ, ಹೂಗುಚ್ಛ ನೀಡಿ ಸಕಲ ಗೌರವಗಳೊಂದಿಗೆ ಸ್ವಾಗತಿಸಲಾಯಿತು.
ಇದನ್ನು ಓದಿದ್ದೀರಾ? ರಾಮನಗರ | ಸಜ್ಜನಿಕೆಯ ರಾಜಕಾರಣ ಎಸ್.ಎಂ.ಕೃಷ್ಣ ಸಾವಿನೊಂದಿಗೆ ಕೊನೆಯಾಗಿದೆ: ಡಾ. ಎಂ.ಬೈರೇಗೌಡ
ಸಮೇಳನಾಧ್ಯಕ್ಷರು ಪುರ ಪ್ರವೇಶಿಸುವ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ, ಶಾಸಕರುಗಳಾದ ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಹೂಗುಚ್ಛ ನೀಡಿ ಸ್ವಾಗತಿಸಿದರು.
ಸಮ್ಮೇಳನಾಧ್ಯಕ್ಷರು ಮಂಡ್ಯ ನಗರ ಪ್ರವೇಶಿಸುತ್ತಿದ್ದಂತೆ ಬೆಂಗಳೂರು ಮೈಸೂರು ರಸ್ತೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಮ್ಮೇಳನಾಧ್ಯಕ್ಷರಿಗೆ ಹೂ ನೀಡಿ ಸ್ವಾಗತ ಕೋರಿದರು. ನಂತರ ಜಿಲ್ಲಾಧಿಕಾರಿ ನಿವಾಸಕ್ಕೆ ಕರೆದೊಯ್ದು ಅತಿಥಿ ಸತ್ಕಾರ ನೀಡಲಾಯಿತು.