ಸಕ್ಕರೆ ನಾಡಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

Date:

Advertisements

ಶುಕ್ರವಾರದಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ.

ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಪರಿಷತ್ತಿನ ಧ್ವಜಗಳ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆ ಮುಖ್ಯದ್ವಾರದ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಸಚಿವ ಚಲುವರಾಯಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದು, ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ, ಕ.ಸಾ.ಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ನಾಡ ಧ್ವಜಾರೋಹಣ ಮಾಡಿದರು.

ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಪರಿಷತ್ತು ಧ್ವಜ ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧ್ವಜಾರೋಹಣದ ವೇಳೆ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ್, ಸಿಇಓ ಶೇಕ್ ತನ್ವೀರ್ ಆಸೀಫ್, ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ಉಪಸ್ಥಿತರಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಸಮ್ಮೇಳನಾಧ್ಯಕ್ಷರ ಮೆರವಣಿಗೆ ಒಂದೂವರೆ ಗಂಟೆ ತಡವಾಗಿ ಆರಂಭ

ವಿಶೇಷ ರಥದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಒಂದೂವರೆ ಗಂಟೆ ತಡವಾಗಿ ಆರಂಭವಾಯಿತು. 87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು. ಚನ್ನಬಸಪ್ಪ ಅವರು “ಅರಮನೆ ದರ್ಬಾರ್ ಸಿಂಹಾಸನ” ಒಳಗೊಂಡ ವಿಶೇಷ ರಥವನ್ನು ಏರಿದ್ದು ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿದೆ.

ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮೊದಲು ರಥ ಏರಿ ನಂತರ ಗೊರುಚ ಅವರಿಗೆ ಸಹಾಯ ಹಸ್ತ ಚಾಚಿ ರಥಕ್ಕೆ ಬರಮಾಡಿಕೊಂಡರು.

ವಿವಿಧ ಜಿಲ್ಲೆ ಮತ್ತು ಹೊರರಾಜ್ಯಗಳ 157 ಕಲಾತಂ ಡಗಳು 2,250 ಕಲಾವಿದರು ಭಾಗಿಯಾಗಿದ್ದಾರೆ. ಮಂಡ್ಯ ನಗರದ ಸರ್ ಎಂ ವಿಶ್ವೇ ಶ್ವರಯ್ಯ ಪ್ರತಿಮೆ ಮುಂಭಾಗದಿಂದ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದ ಸಮ್ಮೇಳನದ ವೇದಿಕೆ ಸ್ಥಳಕ್ಕೆ ಆರು ಕಿಲೋ ಮೀಟರ್ ಅಂತರದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಬೆಳಿಗ್ಗೆ ಏಳು ಗಂಟೆಗೆ ಆರಂಭವಾಗಬೇಕಿತ್ತು. ಆದರೆ ಬೆಳಗ್ಗೆ 8:25ಕ್ಕೆ ಆರಂಭಗೊಂಡಿತು. ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಮೈಸೂರು ಅರಮನೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಬೇಕಿತ್ತು. ಅವರು ಗೈರು ಹಾಜರಿಯಾದ ಕಾರಣ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X