ದಲಿತ ವಿದ್ಯಾರ್ಥಿಗಳಿಗೆ ಮಂಜೂರಾಗದ ವಿದ್ಯಾರ್ಥಿ ವೇತನ: ಸದನದಲ್ಲಿ ಒಪ್ಪಿಕೊಂಡ ಸಚಿವರು

Date:

Advertisements

2024ನೇ ಸಾಲಿನ ಶೈಕ್ಷಣಿಕ ವರ್ಷ ಕೊನೆಗೊಳ್ಳುತ್ತಿದ್ದರೂ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೇ ಮಂಜೂರಾಗಿಲ್ಲ. ಈ ವಿಚಾರವು ಸರ್ಕಾರದ ಗಮನಕ್ಕೆ ಬಂದಿದೆ. ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದರೂ ಇಲ್ಲಿಯವರೆಗೆ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾಗಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸ್ವತಃ ಸಾಮಾಜಿಕ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೆಲ ಶಾಸಕರು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು . ಇದಕ್ಕೆ 2024ರ ಡಿಸೆಂಬರ್‌ 18ರಂದು ಉತ್ತರ ನೀಡಿರುವ ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಗಮನಕ್ಕೆ ಬಂದಿದೆ ಎಂಬ ಉತ್ತರವನ್ನೂ ನೀಡಿದ್ದಾರೆ.

2024-25ನೇ ಸಾಲಿನಲ್ಲಿ ಮೆಟ್ರಿ ಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿಯಲ್ಲಿ ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿ ಹಾಗೂ ಪಾವತಿಯು ಪ್ರಗತಿಯಲ್ಲಿದೆ. ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಮತ್ತು ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 9,12,801 ಅರ್ಜಿಗಳನ್ನು ಸ್ವೀಕರಿಸಿರುವುದು ಉತ್ತರದಿಂದ ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಸ್ವೀಕರಿಸಲಾದ ಅರ್ಜಿಗಳಲ್ಲಿ ಇಲ್ಲಿಯವರೆಗೆ 8,07,515 ಅರ್ಜಿಗಳಿಗೆ ಅನುಮೋದನೆ ನೀಡಿದೆ. ಈ ಪೈಕಿ 7,55,125 ವಿದ್ಯಾರ್ಥಿಗಳಿಗೆ ಒಟ್ಟಾರೆ 107.34 ಕೋಟಿ ರೂ. ವಿದ್ಯಾರ್ಥಿ ವೇತನ ಪಾವತಿಯಾಗಿದೆ. ಸ್ವೀಕರಿಸಿರುವ ಅರ್ಜಿಗಳ ಅಂಕಿ ಅಂಶಗಳ ಪ್ರಕಾರ ಇನ್ನೂ 1,05,286 ವಿದ್ಯಾರ್ಥಿಗಳ ಅರ್ಜಿಗಳನ್ನು ಅನುಮೋದಿಸಲು ಬಾಕಿ ಇದೆ. ಈ ಅರ್ಜಿಗಳಿಗೆ ಅನುಮೋದನೆ ಸಿಕ್ಕ ನಂತರವಷ್ಟೇ ವಿದ್ಯಾರ್ಥಿ ವೇತನವು ಮಂಜೂರಾಗಲಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1ರಿಂದ 8ನೇ ತರಗತಿ) ಒಟ್ಟು 4,63,347 ಅರ್ಜಿಗಳನ್ನು ಸ್ವೀಕರಿಸಿದೆ. ಈ ಪೈಕಿ 4,58,899 ಅರ್ಜಿಗಳಿಗೆ ಅನುಮೋದನೆ ನೀಡಿದೆ.

ಅನುಮೋದಿಸಲು 4,448 ಅರ್ಜಿಗಳು ಬಾಕಿ ಇವೆ. ಅನುಮೋದನೆ ಪಡೆದು ಕೊಂಡಿರುವ ವಿದ್ಯಾರ್ಥಿಗಳಿಗೆ 51.73 ಕೋಟಿ ರು. ಪಾವತಿಸಿದೆ. ಅದೇ ರೀತಿ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,18,161 ಅರ್ಜಿಗಳನ್ನು ಸ್ವೀಕರಿಸಿರುವ ಸರ್ಕಾರವು 2,14,732 ಅರ್ಜಿಗಳಿಗೆ ಅನುಮೋದನೆ ನೀಡಿದೆ. 29.82 ಕೋಟಿ ರು. ಪಾವತಿಸಿದೆ. 3,429 ಅರ್ಜಿಗಳಿಗೆ ಇನ್ನಷ್ಟೇ ಅನುಮೋದನೆ ಸಿಗಬೇಕಿದೆ. ಹಾಗೆಯೇ ಕೇಂದ್ರ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,31,293 ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ 1,33,884 ಸಂಖ್ಯೆಯ ಅರ್ಜಿಗಳನ್ನಷ್ಟೇ ಅನುಮೋದಿಸಿರುವ ಸರ್ಕಾರವು 25.79 ಕೋಟಿ ರು. ಪಾವತಿಸಿದೆ. 97,409 ಅರ್ಜಿಗಳಿಗೆ ಅನುಮೋದನೆ ನೀಡಲು ಬಾಕಿ ಇರಿಸಿಕೊಂಡಿರುವುದು ತಿಳಿದುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X