ಅವಾಚ್ಯ ಪದ ಬಳಸಿದ್ದರಿಂದಲೇ ಸಿ ಟಿ ರವಿ ಅರೆಸ್ಟ್: ಸಿಎಂ ಸಿದ್ದರಾಮಯ್ಯ

Date:

Advertisements

ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಸುಖಾಸುಮ್ಮನೇ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ ಟಿ ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಿ ಟಿ ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ” ಎಂದರು.

“ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ” ಎಂದು ಹೇಳಿದರು.

Advertisements

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ

ಸಿ ಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X