ಸಿ ಟಿ ರವಿ ಒಬ್ಬನೇ ಇಷ್ಟು ಕೀಳು ಮಟ್ಟದ ಸಂಸ್ಕೃತಿ ಹೊಂದಿರುವ ವ್ಯಕ್ತಿ: ಡಿ ಕೆ ಶಿವಕುಮಾರ್‌ ವಾಗ್ದಾಳಿ

Date:

Advertisements

ಸಿ ಟಿ ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ
ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಶುಕ್ರವಾರ ಮಾತನಾಡಿ, “ಈ ಹಿಂದೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದರು. ಹೀಗೆ ನಮ್ಮ ನಾಯಕರ ವಿರುದ್ಧ ಬಹಳ ಕೀಳು ಮಟ್ಟದ ಪದ ಬಳಕೆ ಮಾಡಿದ್ದಾರೆ. ಇದು ಚಿಕ್ಕಮಗಳೂರು ಸಂಸ್ಕೃತಿಯೇ? ಭಾರತದ ಸಂಸ್ಕೃತಿಯೇ? ಬಿಜೆಪಿ ಸಂಸ್ಕೃತಿಯೇ? ಚಿಕ್ಕಮಗಳೂರಿನಲ್ಲಿ ಇಂತಹ ಸಂಸ್ಕೃತಿಯನ್ನು ನಾನು ಈವರೆಗೂ ನೋಡಿಲ್ಲ. ಇಡೀ ಚಿಕ್ಕಮಗಳೂರಿನಲ್ಲಿ ಇವನೊಬ್ಬನೇ ಇಷ್ಟು ಕೀಳು ಮಟ್ಟದ ಸಂಸ್ಕೃತಿ ಹೊಂದಿರುವ ವ್ಯಕ್ತಿ” ಎಂದು ಕಿಡಿಕಾರಿದರು.

“ಸದನದಲ್ಲಿ ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹಸಚಿವರು ಅಪಮಾನ ಮಾಡಿದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಈತ ರಾಹುಲ್ ಗಾಂಧಿ ಅವರನ್ನು ಮಾದಕ ವ್ಯಸನಿ ಎಂದು ನಿಂದಿಸಿದರು. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಪಕ್ಷದ ನಾಯಕನ ಸಮರ್ಥನೆಗೆ ಮುಂದಾದಾಗ, ಆತ ನಮ್ಮ ಸಚಿವರನ್ನು ಹಲವು ಬಾರಿ ಪ್ರಾ**ಟ್ ಎಂದು ಕರೆದಿದ್ದಾನೆ. ಬಿಜೆಪಿಯವರು ತಮ್ಮ ನಾಯಕನನ್ನು ಹೇಗೆ ಸಮರ್ಥನೆ ಮಾಡಿಕೊಂಡರೋ ಅದೇ ರೀತಿ ನಮ್ಮ ಸಚಿವರು ನಮ್ಮ ನಾಯಕರನ್ನು ಸಮರ್ಥನೆ ಮಾಡಿಕೊಂಡಿದ್ದಾರೆ, ತಪ್ಪೇ? ಅದಕ್ಕಾಗಿ ಇಂತಹ ಪದ ಬಳಸುವುದೇ” ಎಂದು ಪ್ರಶ್ನಿಸಿದರು.

Advertisements

“ಒಟ್ಟು 12 ಬಾರಿ ಈ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಮಾಧ್ಯಮಗಳು ಈ ಎಲ್ಲ ಅಂಶಗಳನ್ನು ಸೇರಿ ಸುದ್ದಿ ಪ್ರಕಟಿಸಬೇಕು. ನಿಮ್ಮ ಬಳಿ ದಾಖಲೆ ಇಲ್ಲವಾದರೆ ಹೇಳಿ ನಾನು ನೀಡುತ್ತೇನೆ. ಪರಿಷತ್ತಿನಲ್ಲಿ ಗುರುವಾರದಂದು ನನ್ನ ಇಲಾಖೆಗಳಿಗೆ ಸಂಬಂಧಿಸಿದ 12 ಪ್ರಶ್ನೆಗಳಿದ್ದವು. ಅವುಗಳಿಗೆ ಉತ್ತರ ನೀಡಿ ನಾನು ವಿಧಾನಸಭೆಗೆ ಬಂದಾಗ ಈ ಘಟನೆ ನಡೆದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಅವಾಚ್ಯ ಪದ ಬಳಸಿದ್ದರಿಂದಲೇ ಸಿ ಟಿ ರವಿ ಅರೆಸ್ಟ್: ಸಿಎಂ ಸಿದ್ದರಾಮಯ್ಯ

ಸಭಾಪತಿಗಳ ನಡೆ ಬೇಸರ ತಂದಿದೆ

ಸಾಕ್ಷಿಗಳು ಇದ್ದರೆ ಸಭಾಪತಿಗಳು ಕ್ರಮ ಕೈಗೊಳ್ಳಬಹುದಿತ್ತಲ್ಲವೇ ಎಂದು ಕೇಳಿದಾಗ, “ಅವರು ಹಿರಿಯ ನಾಯಕರು. ಅವರ ಬಗ್ಗೆ ನನಗೆ ಗೌರವವಿದೆ. ಆದರೆ ಈ ವಿಚಾರದಲ್ಲಿ ಅವರ ನಡೆ ಬೇಸರ ತಂದಿದೆ. ಅವರು ಯಾವುದೇ ಪಕ್ಷದವರಾದರೂ ಸಭಾಪತಿ ಸ್ಥಾನದಲ್ಲಿ ಕೂತಾಗ ಎಲ್ಲರ ರಕ್ಷಣೆ ಮಾಡಬೇಕು. ಈ ವಿಚಾರವಾಗಿ ಅವರು ನಿನ್ನೆ ಚರ್ಚೆಗೆ ಅವಕಾಶ ನೀಡಬೇಕಿತ್ತು. ಅಲ್ಲಿ ಏನಾಗಿದೆ ಎಂದು ಪರಿಶೀಲನೆ ಮಾಡಬೇಕಿತ್ತು. ಒಂದು ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತಪ್ಪಿದ್ದರೆ ಅವರದ್ದೆ ತಪ್ಪು ಎಂದು ಹೇಳಬೇಕಿತ್ತು. ಅದನ್ನು ಬಿಟ್ಟು ಇಬ್ಬರನ್ನು ಕರೆದುಕೊಂಡು ಹೋಗಿ ಹೇಳಿಕೆ ಬರೆಸಿಕೊಳ್ಳುವುದು ಸರಿಯಲ್ಲ” ಎಂದು ಹೇಳಿದರು.

ಪೊಲೀಸರು ರಾತ್ರಿ ಪೂರ್ತಿ ತಿರುಗಾಡಿಸಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಪೊಲೀಸರು ಏನು ಮಾಡಿದ್ದಾರೆ ಗೊತ್ತಿಲ್ಲ. ಸುಮ್ಮನೆ ಆರೋಪ ಮಾಡುತ್ತಾರೆ. ಪೊಲೀಸರು ಬೇರೆಯವರಿಗಿಂತ ಹೆಚ್ಚು ಸೌಜನ್ಯ ತೋರಿದ್ದಾರೆ. ಪೊಲೀಸ್ ಠಾಣೆಯಲ್ಲಿ ಅವರ ಮನೆಯವರಿಗೆ ಅವಕಾಶ ನೀಡಲಿ. ಅದನ್ನು ಬಿಟ್ಟು ಖಾನಾಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಬಿಟ್ಟುಕೊಂಡು ಬಿಜೆಪಿ ಸಭೆ ಮಾಡುವುದು ಎಷ್ಟು ಸರಿ? ಈ ವಿಚಾರದಲ್ಲಿ ಪೊಲೀಸರ ನಡೆ ಸರಿಯಿಲ್ಲ. ನಾವು ಪೊಲೀಸರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿದ್ದರೂ ಅವರಿಗೆ ಯಾವುದೇ ತೊಂದರೆ ಆಗಲು ಅವಕಾಶ ನೀಡಿಲ್ಲ. ತಮ್ಮ ಶಾಸಕಿಗೆ ಅಪಮಾನ ಮಾಡಿದರೆ ಕ್ಷೇತ್ರದ ಜನ ರೊಚ್ಚಿಗೇಳುವುದು ಸಹಜ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X