ಹರಿಯಾಣದ ಮಾಜಿ ಸಿಎಂ ಮತ್ತು ಭಾರತೀಯ ರಾಷ್ಟ್ರೀಯ ಲೋಕದಳ ಮುಖ್ಯಸ್ಥ ಓಂ ಪ್ರಕಾಶ್ ಚೌಟಾಲಾ (89) ಶುಕ್ರವಾರ (ಡಿ.20), ಗುರುಗ್ರಾಮದ ತಮ್ಮ ನಿವಾಸದಲ್ಲಿ ನಿಧನರಾದರು.
ಭಾರತದ 6ನೇ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಚೌಧರಿ ದೇವಿಲಾಲ್ ಅವರ ಪುತ್ರನಾಗಿ 1935ರ ಜನವರಿ 1ರಲ್ಲಿ ಚೌಟಾಲಾ ಜನಿಸಿದರು. 1989ರಲ್ಲಿ ಮೊದಲ ಬಾರಿಗೆ ಹರಿಯಾಣ ಮುಖ್ಯಮಂತ್ರಿಯಾಗಿ 6 ತಿಂಗಳ ಕಾಲ ಹುದ್ದೆಯಲ್ಲಿದ್ದರು. ಬಳಿಕ 2 ತಿಂಗಳ ನಂತರ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಇದಾದ 5 ದಿನಗಳಲ್ಲೇ ರಾಜೀನಾಮೆ ನೀಡುವ ಪರಿಸ್ಥಿತಿ ಬಂದೊದಗಿತು. ಬಳಿಕ 1991ರಲ್ಲಿ 3ನೇ ಅವಧಿಗೆ ಸಿಎಂ ಆದರು. ಇದಾದ 2 ವಾರಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದರಿಂದ ಸಿಎಂ ಸ್ಥಾನ ಕಳೆದುಕೊಂಡರು. ನಂತರ 1999 ರಿಂದ 2025ರ ನಡುವೆ ಸತತ 2 ಅವಧಿಗೆ ಸಿಎಂ ಆಗಿ ಸೇವೆ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್’- ಅಮಿತ್ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು
ಚೌಟಾಲಾ ಅವರ ವೃತ್ತಿ ಜೀವನವು ವಿವಾದಗಳಿಂದ ತುಂಬಿತ್ತು. 1999-2000 ಅವಧಿಯಲ್ಲಿ ಹರಿಯಾಣದಲ್ಲಿ ಕಿರಿಯ ಮೂಲ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಹಗರಣದಲ್ಲಿ ಚೌಟಾಲಾಗೆ ನ್ಯಾಯಾಲಯ 2013 ರಲ್ಲಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತು. 2021ರಲ್ಲಿ ಜೈಲಿನಿಂದ ಬಿಡುಗಡೆಯಾದರು. ಆಗ ಅವರ ವಯಸ್ಸು 87.
