ಅದಾನಿ ಗ್ರೂಪ್ ವಿರುದ್ಧದ ವಂಚನೆಗೆ ಸಂಬಂಧಿಸಿ ಅಮೆರಿಕದಲ್ಲಿ ಮಾಡಿರುವ ದೋಷಾರೋಪಣೆ ಹಿಂದಿರುವ ಅಟಾರ್ನಿ ಬ್ರಿಯಾನ್ ಪೀಸ್ ಅವರು ಜನವರಿ 10ರಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ ಎಂದು ವರದಿಯಾಗಿದೆ.
2021ರಲ್ಲಿ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು ಬ್ರಿಯಾನ್ ಪೀಸ್ ಅವರನ್ನು ಸರಕಾರಿ ವಕೀಲರಾಗಿ ನೇಮಕ ಮಾಡಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಕೆಲವೇ ದಿನಗಳ ಮೊದಲು ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್’- ಅಮಿತ್ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು
ಬ್ರಿಯಾನ್ ಪೀಸ್ ಅವರು ಗೌತಮ್ ಅದಾನಿ ವಿರುದ್ಧದ ದೋಷಾರೋಪಣೆ ಸೇರಿದಂತೆ ಉನ್ನತ ಪ್ರಕರಣಗಳಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಆಗಸ್ಟ್ ನಲ್ಲಿ ಜಾರ್ಜ್ ಸ್ಯಾಂಟೋಸ್ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪ ಸಾಬೀತಾಗಿದೆ. ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿ 2022ರಲ್ಲಿ ಹಿಪ್ ಹಾಪ್ ತಾರೆ ಕೆಲ್ಲಿ ಅವರಿಗೆ 30 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ನವೆಂಬರ್‌ನಲ್ಲಿ ಬ್ರಿಯಾನ್ ಪೀಸ್ ಅವರು ಗೌತಮ್ ಅದಾನಿ ಮತ್ತು ಇತರರ ವಿರುದ್ಧ ಸೌರ ಗುತ್ತಿಗೆ ಒಪ್ಪಂದಕ್ಕೆ ಸಂಬಂಧಿಸಿ ವಂಚನೆ ಮತ್ತು ಲಂಚದ ಆರೋಪವನ್ನು ಮಾಡಿದ್ದರು.
