ಜನತಾ ದರ್ಶನ ಆರಂಭ : ಜನನಾಯಕನಿಗೆ ಅಹವಾಲು ಸಲ್ಲಿಸಲು ಬಂದ ನಾಗರಿಕರು

Date:

Advertisements
  • ಟೇಕಾಫ್ ಆದ ಸರ್ಕಾರ; ಜನತಾದರ್ಶನ ಆರಂಭಿಸಿದ ಸಿದ್ದರಾಮಯ್ಯ
  • ಮುಖ್ಯಮಂತ್ರಿಗೆ ಅಹವಾಲು ಸಲ್ಲಿಸಲು ಹರಿದು ಬಂದ ಜನ

ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಮಹತ್ವದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಜನಸೇವೆಯತ್ತ ಮುಖ ಮಾಡಿ ಜನತಾ ದರ್ಶನ ಆರಂಭಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ಎರಡು ದಿನದಲ್ಲೇ ರಾಜಧಾನಿಯಲ್ಲಿನ ಮಳೆ ಅವಾಂತರಕ್ಕೆ ಸಿಕ್ಕು ಸಾವನ್ನಪ್ಪಿದ್ದ ಯುವತಿ ಕುಟುಂಬಕ್ಕೆ ಸಾಂತ್ವನ ಹೇಳಿ, ಮಳೆಗಾಲಕ್ಕೆ ನಗರವನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವ ಕಾರ್ಯವನ್ನು ಸಿದ್ದರಾಮಯ್ಯ ಮಾಡಿದ್ದರು.

ಜನಪರ ಕಾಳಜಿಕ ಕೆಲಸದ ಮೂಲಕ ಆಡಳಿತ ಯಂತ್ರಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅದರ ಮುಂದಿನ ಭಾಗವಾಗಿ ಜನತಾದರ್ಶನ ಆರಂಭಿಸಿದ್ದಾರೆ.

Advertisements

ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿಯವರ ಕನಸಿನ ಕೂಸಾದ ಈ ಯೋಜನೆಯನ್ನು ಜನಾನುರಾಗಿಯಾಗಿ, ಅಷ್ಟೇ ಸಮರ್ಥವಾಗಿ ಮುನ್ನಡೆಸಿಕೊಂಡು ಬಂದವರು ಸಿದ್ದರಾಮಯ್ಯ.

ತಮ್ಮ ಎರಡನೇ ಅವಧಿಯಲ್ಲೂ ಅದರತ್ತ ಆಸ್ಥೆ ವಹಿಸಿರುವ ಸಿಎಂ, ಸೋಮವಾರ ಮುಂಜಾನೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನರ ದೂರು, ಅಹವಾಲುಗಳನ್ನು ಆಲಿಸಿ, ಅಧಿಕಾರಿಗಳಿಗೆ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದರು.ಗ್ಯಾರಂಟಿ ಮೀಟಿಂಗ್

ಈ ಸುದ್ದಿ ಓದಿದ್ದೀರಾ?: ಗ್ಯಾರಂಟಿ ಜಾರಿಗೆ ಸಮಯ ಬೇಕು; ಕೊಟ್ಟ ಮಾತು ಈಡೇರಿಸುತ್ತೇವೆ : ಡಿ ಕೆ ಶಿವಕುಮಾರ್

ಸಿಎಂ ಅವರ ಈ ಕಾರ್ಯಕ್ಕೆ ನೆರೆದಿದ್ದವರಿಂದಲೂ ಮೆಚ್ಚುಗೆ ವ್ಯಕ್ತವಾಯಿತು. ಇದಾದ ಬಳಿಕ ನಿಗದಿಯಂತೆ ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಜಾರಿ ಸಲುವಾಗಿ ಸಭೆ ನಡೆಸಿದರು.

ಈ ಸಭೆಯಲ್ಲಿ ಎಲ್ಲ ಇಲಾಖೆ ಪ್ರಮುಖರು ಭಾಗವಹಿಸಿ, ಇಲಾಖೆಗಳಲ್ಲಿನ ಆರ್ಥಿಕ ಸ್ಥಿತಿ, ಪ್ರಗತಿ ಹಾಗೂ ಯೋಜನೆ ಜಾರಿಗೆ ಅಗತ್ಯವಾದ ಸಲಹೆ ಸೂಚನೆಗಳನ್ನು ಮುಖ್ಯಮಂತ್ರಿಗಳಿಗೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X