ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಿರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಸಚಿವ ಅಮಿತ್ ಶಾ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ಗೆ ಸಲ್ಲಿಸಿದರು.
ರಾಜ್ಯಸಭೆಯಲ್ಲಿ ಡಿ.18ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಅನ್ನೋದು ಈಗ ಕೆಲವರಿಗೆ ಫ್ಯಾಷನ್ ಆಗಿದೆ. ಇಷ್ಟು ಬಾರಿ ದೇವರ ನಾಮ ಜಪಿಸಿದರೆ ಏಳೇಳು ಜನ್ಮಕೂ ಸ್ವರ್ಗ ಪ್ರಾಪ್ತಿಯಾಗುತ್ತದೆ” ಎಂದು ಮಾತನಾಡಿ ಬಾಬಾ ಸಾಹೇಬ್ರಿಗೆ ಘೋರ ಅವಮಾನ ಮಾಡಿದ್ದಾರೆ. ಇದು ಸಂವಿಧಾನಕ್ಕೂ ಪರೋಕ್ಷವಾಗಿ ಅವಮಾನ ಮಾಡಿದಂತೆ ಆಗಿದೆ’ ಎಂದು ತೀವ್ರವಾಗಿ ಖಂಡಿಸಿದರು.
ಅಂಬೇಡ್ಕರ್ ಹಾಗೂ ಸಂವಿಧಾನದ ಕುರಿತು ಗೃಹಮಂತ್ರಿ ಅಮಿತ್ ಶಾ ಆಡಿದ ಮಾತುಗಳಿಂದ ದೇಶದ ಕೋಟ್ಯಂತರ ಅಂಬೇಡ್ಕರ್ ಅನುಯಾಯಿಗಳ ಭಾವನೆಗೆ ದಕ್ಕೆ ತಂದಿದೆ. ಇಂತಹ ಪ್ರಚೋದನಕಾರಿ ಹೇಳಿಕೆಗಳಿಂದ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತದೆ. ಹೀಗಾಗಿ ಅವರನ್ನು ಬಂಧಿಸಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಅಂಬೇಡ್ಕರ್ ಕುರಿತು ಹೇಳಿಕೆ : ಅಮಿತ್ ಶಾ ವಜಾಕ್ಕೆ ಕಾಂಗ್ರೆಸ್ ಆಗ್ರಹ
ಪ್ರತಿಭಟನೆಯಲ್ಲಿ ಮಾನವ ಬಂಧುತ್ವ ವೇದಿಕೆ ಮುಖಂಡ ಮೇಶಕ್ ದೊಡ್ಮನಿ , ದಲಿತ ಮುಖಂಡರು ಜಯಪ್ಪ ಗುತ್ತೇದಾರ , ಪ್ರಕಾಶ ಜಿ , ಅರಳಪ್ಪ ಯದ್ದಲದಿನ್ನಿ , ಹನುಮಂತ ಕ್ಯಾದಿಗೇರ್, ಮೌನೇಶ್ ಮರಾಠ , ಫಕೀರಪ್ಪ ಕಡದಿನ್ನಿ, ಮಲ್ಲಯ್ಯ ದೊರೆ ಹಾಗೂ ಇತರರು ಭಾಗವಹಿಸಿದ್ದರು.
