ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಯೊಬ್ಬರು ಮೃತಪಟ್ಟಿರುವ ಘಟನೆ ಹುಲಸೂರ ತಾಲ್ಲೂಕಿನ ಸೋಲದಾಬಕಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 752ರಲ್ಲಿ ಶನಿವಾರ ಬೆಳಗ್ಗೆ ಬಳಿ ನಡೆದಿದೆ.
ಹುಲಸೂರ ತಾಲ್ಲೂಕಿನ ಸೋಲದಾಬಕಾ ಗ್ರಾಮದ ವನಿತಾ ಧೊಂಡಿಬಾ ಬಿರಾದಾರ (35) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಔರಾದ್(ಎಸ್) ಕಡೆಯಿಂದ ಭಾಲ್ಕಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಡಿಕ್ಕಿ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ ಮೂವರು ಹೆಣ್ಣು ಮಕ್ಕಳು ಇದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಅಂಬೇಡ್ಕರ್ ಕುರಿತು ಹೇಳಿಕೆ : ಅಮಿತ್ ಶಾ ವಜಾಕ್ಕೆ ಕಾಂಗ್ರೆಸ್ ಆಗ್ರಹ
ಈ ಕುರಿತು ಹುಲಸೂರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.