ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ಖಂ ನೀಡಿರುವುದನ್ನು ಖಂಡಿಸಿ, ಶನಿವಾರ ಬೌದ್ಧ ಸಮಾಜದ ನೇತ್ರತ್ವದಲ್ಲಿ ಹಮ್ಮಿಕೊಂಡಿದ್ದ ವಾಡಿ ಪಟ್ಟಣ ಬಂದ್‌ಗೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು ಸಾಥ್ ನೀಡಿದವು.
ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಸಂಪೂರ್ಣ ಬಂದ್ ವಿವಿಧ ಅಂಗಡಿ ಮುಗ್ಗಟ್ಟು, ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಹೋರಾಟಕ್ಕೆ ಬೆಂಬಲಿಸಿದರು. ಪಟ್ಟಣದ ಕುಂದನೂರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಅಮಿತ್ ಶಾ ಅವರ ಶವಯಾತ್ರೆ ಮೆರವಣಿಗೆ ಮಾಡಿ ಅಂಬೇಡ್ಕರ್ ವೃತ್ತದ ಬಳಿ ಅವರ ಪ್ರತಿಕೃತಿ ದಹಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿದರು.
“ಡಿ.18ರಂದು ರಾಜ್ಯಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎನ್ನುವುದು ಫ್ಯಾಷನ್ ಆಗಿದೆ. ಅದರ ಬದಲು ದೇವರ ಹೆಸರು ಹೇಳಿದರೆ ಏಳೇಳು ಜನ್ಮದಲ್ಲೂ ಸ್ವರ್ಗ ಸಿಗುತ್ತಿತ್ತುʼ ಎಂಬ ಆಕ್ಷೇಪಾರ್ಹವಾಗಿ ಆಡಿದ ಮಾತುಗಳು ಡಾ.ಅಂಬೇಡ್ಕರ್ ಅವರನ್ನು ಅಪಮಾನಿಸಿದ್ದಾರೆ. ಇದರಿಂದ ಕೋಟ್ಯಾಂತರ ಅಂಬೇಡ್ಕರ್ ಅನುಯಾಯಿಗಳ ಭಾವನೆಗೆ ದಕ್ಕೆ ತಂದಿದ್ದಾರೆʼ ಎಂದರು.

ʼಶತಮಾನಗಳಿಂದ ಇದ್ದ ಜಾತಿ ವರ್ಣ ವ್ಯವಸ್ಥೆ ದಾಸ್ಯದ ಸಂಕೋಲೆಯಿಂದ ಬಿಡುಗಡೆಗೊಳಿಸಿದ ಬಾಬಾ ಸಾಹೇಬ್ ಅಂಬೇಡ್ಕರ್, ಇಂದು ದೇಶ ಸ್ವಾಭಿಮಾನದಿಂದ ತಲೆಯೆತ್ತಿ ನಡೆಯುತ್ತಿದ್ದರೆ ಅದಕ್ಕೆ ಬಾಬಾ ಸಾಹೇಬರ ಹೋರಾಟವೇ ಕಾರಣ. ಶೋಷಿತ, ತಳಸಮುದಾಯದಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟ ಅಂಬೇಡ್ಕರ್ ಅವರಿಗೆ ಅಮಿತ್ ಶಾ ಅವಮಾನಿಸಿದ್ದು ತೀವ್ರವಾಗಿ ಖಂಡಿಸುತ್ತೇವೆʼ ಎಂದರು.
ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೇಶಾದ್ಯಂತ ತೀವ್ರ ಹೋರಾಟ ರೂಪಿಸಲಾಗುವುದುʼ ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಸಂಪುಟದಿಂದ ಗೃಹ ಸಚಿವ ಅಮಿತ್ ಶಾ ವಜಾಕ್ಕೆ ಆಗ್ರಹ
ಈ ಸಂದರ್ಭದಲ್ಲಿ ಬೌದ್ಧ ಸಮಾಜ ಅಧ್ಯಕ್ಷ ಟೋಪಣ್ಣ ಕೋಮಟೆ, ಖಜಾಂಚಿ ಚಂದ್ರಶೇಖರ ಮೆನುಗಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮೆಹಮೂದ್ ಸಾಹೇಬ್ ಹಾಗೂ ಬಲರಾಮ ಮಟ್ಟ, ಮಲ್ಲೇಶ ಚುಕ್ಕೇರ, ಮಲ್ಲಿಕಾರ್ಜುನ್ ತುನ್ನೂರ, ಸತೀಶ ಬಟ್ಟರ್ಕಿ, ಶರಣಬಸು ಸಿರೂರಕರ್, ರದ್ದೇವಾಡಿ, ಮಲ್ಲಿಕಾರ್ಜುನ ಕಟ್ಟಿ, ಮಲ್ಲೇಶ ನಾಟೇಕರ್, ಗೊಲ್ಲಾಳಪ್ಪ ಬಡಿಗೇರ, ಸೀತಾ ಬಡಿಗೇರ್ ರವಿ, ಕಾಶಿನಾಥ ಶೇಳ್ಳಗಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಸಾರ್ವಜನಿಕರು, ಅಂಗಡಿ, ಮುಗ್ಗಟ್ಟು ಮಾಲಿಕರು ಭಾಗವಹಿಸಿದ್ದರು.