ಅಭ್ಯರ್ಥಿಗಳಿಗೆ ಮತಗಟ್ಟೆ ಸಿಸಿಟಿವಿ ದೃಶ್ಯಾವಳಿ ಲಭ್ಯವಿಲ್ಲ: ಚುನಾವಣಾ ಆಯೋಗ

Date:

Advertisements

ಚುನಾವಣೆಯ ಮತಗಟ್ಟೆಗಳ ಸಿಸಿಟಿವಿ ದೃಶ್ಯಾವಳಿಯನ್ನು ಅಭ್ಯರ್ಥಿಗಳಿಗೆ ನೀಡುವ ಅಥವಾ ಸಾರ್ವಜನಿಕರಿಗೆ ಬಹಿರಂಗಪಡಿಸುವ ವರ್ಗದಲ್ಲಿ ಸೇರಿಸುವಂತಿಲ್ಲ ಎಂದು ನಿರ್ದಿಷ್ಟಪಡಿಸುವುದೂ ಸೇರಿದಂತೆ ಚುನಾವಣಾ ನಿಯಮಾವಳಿಗಳಲ್ಲಿ ಆಯೋಗ ಹಲವು ಬದಲಾವಣೆಗಳನ್ನು ಪ್ರಕಟಿಸಿದೆ.

ಈ ತಿದ್ದುಪಡಿಗೆ ಮುನ್ನ ಚುನಾವಣೆ ನಡೆಸು ನಿಯಮಾವಳಿಯ ಸೆಕ್ಷನ್ 93(2) ಅನ್ವಯ ನ್ಯಾಯಾಲಯದ ಅನುಮತಿಯ ಬಳಿಕ ಚುನಾವಣೆಗೆ ಸಂಬಂಧಿಸಿದ ಎಲ್ಲ ಕಾಗದಪತ್ರಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿದ್ದವು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಮೋದಿ ಸರ್ಕಾರ ಹಾಗೂ ಚುನಾವಣಾ ಆಯೋಗ ಪಾರದರ್ಶಕತೆಗೆ ಧಕ್ಕೆ ತರುತ್ತಿದೆ ಮತ್ತು ಚುನಾವಣಾ ಪ್ರಕ್ರಿಯೆಯ ನಿಷ್ಠೆಯನ್ನು ಅಳಿಸಿಹಾಕುತ್ತಿದೆ” ಎಂದು ದೂರಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

Advertisements

ಆದರೆ ಮತದಾರರ ಖಾಸಗಿತನವನ್ನು ರಕ್ಷಿಸುವ ಮತ್ತು ಅವರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ. ಹರಿಯಾಣ ವಿಧಾನಸಭಾ ಚುನಾವಣೆಗೆ ಕುರಿತ ದಾಖಲೆಪತ್ರಗಳನ್ನು ವಕೀಲ ಮೆಹಮೂದ್ ಪ್ರಚಾ ಅವರಿಗೆ ನೀಡುವಂತೆ ಪಂಜಾಬ್ ಮತ್ತು ಹರ್ಯಾಣ ಇತ್ತೀಚೆಗೆ ಸೂಚನೆ ನೀಡಿದ ಬೆನ್ನಲ್ಲೇ ಈ ಬದಲಾವಣೆಗಳನ್ನು ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಚುನಾವಣೆಗೆ ಸಂಬಂಧಿಸಿದ ವಿಡಿಯೊ ಚಿತ್ರೀಕರಣ, ಸಿಸಿಟಿವಿ ದೃಶ್ಯಾವಳಿ ಮತ್ತು ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದ ಫಾರ್ಮ್ ನಂ. 17-ಸಿ ಯ 1 ಮತ್ತು 2ನೇ ಭಾಗವನ್ನು ಒದಗಿಸುವಂತೆ ಅವರು ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗದ ದಿಢೀರ್ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಕಾಂಗ್ರೆಸ್ ವಕ್ತಾರ ಜೈರಾಂ ರಮೇಶ್ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X