ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರು ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದ ನಿರುಪಾದಿ ಹರಿಜನ್ ಎಂಬ ವಿದ್ಯಾರ್ಥಿ ಪ್ರವಾಸದ ವೇಳೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೃತಪಟ್ಟ ಹಿನ್ನಲೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸೇರಿ ಆರು ಜನ ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಶ್ರೀಶೈಲ ಬಿರಾದರ್ ಆದೇಶ ಹೊರಡಿಸಿದ್ದಾರೆ.
ಈ ದುರ್ಘಟನೆಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ ಎಂದು ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಹನುಮೇಶ ಬೆಲ್ಲದ್, ಸಹ ಶಿಕ್ಷಕರಾದ ಶಿವಕುಮಾರ್ ಅವಸಂಗರದ, ನಾಗರಾಜ ಶೆಟ್ಟರ್, ಅಮರೇಶ ಬಳ್ಳಾರಿ ಈರಮ್ಮ ಬಡಿಗೇರ್ ಮತ್ತು ಪದ್ಮಾವತಿ ಪವಾರ್ ಅವರನ್ನು ಅಮಾನತು ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಲೋಕಾಯುಕ್ತ ದಾಳಿ : ಲಂಚ ಪಡೆದ ನೋಟು ನುಂಗಿದ ಸಹಕಾರಿ ಸಂಘಗಳ ಉಪನಿಬಂಧಕ!
ಮೃತ ಬಾಲಕನ ಕುಟುಂಬದವರಿಗೆ ಸರ್ಕಾರದ ವತಿಯಿಂದ ₹5 ಲಕ್ಷ ಪರಿಹಾರ ನೀಡಲಾಗಿದೆ.