ಶಿರಬೀಡು ವಾರ್ಡಿನ ಪ್ರಸನ್ನ ಗಣಪತಿ ದೇವಸ್ಥಾನದ ಸನಿಹ, ಹಾದುಹೋಗುವ ನೀರು ಹರಿಯುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಯಾತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳೀಯರ ನೆರವಿನಿಂದ ವ್ಯಕ್ತಿಯನ್ನು ಮೇಲ್ಕೆತ್ತಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
