ಸದನದಲ್ಲಿ ಸಿ ಟಿ ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಸಿದ್ದು ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ ಟಿ ರವಿ ಆ ಪದ ಬಳಸಿದ್ದು ಸತ್ಯ. ಏಕೆಂದರೆ ಈ ಬಗ್ಗೆ ವಿಡಿಯೋ, ಆಡಿಯೋ ಕ್ಲಿಪಿಂಗ್ ಇವೆ ಎಂದು ತಿಳಿಸಿದರು.
ಎಂಎಲ್‌ಸಿ ಸಿ ಟಿ ರವಿ ಪ್ರಕರಣವನ್ನು ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿದೆ. ಅಲ್ಲಿನ ಶಾಸಕರು, ಪರಿಷತ್ ಸದಸ್ಯರು ಇದಕ್ಕೆ ಸಾಕ್ಷಿಯಾಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ನ್ಯಾಯಾಂಗ ತನಿಖೆಗೆ ಕೇಳುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ರಾಷ್ಟ್ರೀಯ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಈ ರೀತಿ ಪದ ಬಳಿಕೆ ಖಂಡನೀಯವಾಗಿದೆ ಎಂದು ಸಿಎಂ ಅಸಮಾಧಾನ ಹೊರಹಾಕಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!
ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು ಎಂದರು.
