ಕೇಂದ್ರ ಸಚಿವ ಸಂಪುಟದಿಂದ ಅಮಿತ್ ಶಾ ಅವರನ್ನು ಕೂಡಲೇ ವಜಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಾ. ಡಿಜಿ ಸಾಗರ್ ಬಣ) ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿದರು.
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ತೆರಳಿ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
“ಲೋಕಸಭೆ ಅಧಿವೇಶನದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ವಿಶ್ವರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮತ್ತು ಅವಹೇಳನಕರವಾಗಿ ಮಾತನಾಡಿರುವ ಘಟನೆ ಇಡೀ ಮಾನವ ಕುಲ ತಲೆತಗ್ಗಿಸುವ ವಿಷಯವಾಗಿದ್ದು, ಇದೊಂದು ದೇಶದ್ರೋಹಿ ಕೆಲಸವಾಗಿದೆ” ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಖಂಡಿಸಿದೆ.
“ಸ್ವಾತಂತ್ರ್ಯ, ಸಮಾನತೆ, ಭಾತೃತ್ವ ಜಾತ್ಯತೀತ ಪ್ರಜಾಸತ್ತಾತ್ಮಕ 10 ಹಲವಾರು ವಿಷಯಗಳನ್ನು ಒಗ್ಗೂಡಿಸಿಕೊಂಡು ವಿಶ್ವಕ್ಕೆ ಮಾದರಿಯಾಗಿರುವ ಸಂವಿಧಾನವನ್ನು ವಿಶ್ವರತ್ನ ಬಾಬಾ ಸಾಹೇಬ ಅಂಬೇಡ್ಕರ್ ಅವರು ತಮ್ಮ ಅವಿರತ ಪ್ರಯತ್ನದಿಂದ ಸಂವಿಧಾನವನ್ನು ದೊರಕಿಸಿ ಕೊಟ್ಟಿದ್ದಾರೆ. ಸವಿಧಾನ ಈ ದೇಶದ ಜೀವಾಳವಾಗಿದೆ. ಸವಿಧಾನ ನಿರ್ಮಾತೃ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಾಷ್ಟ್ರದ ಅಗ್ರಗಣ್ಯ ನಾಯಕರಾಗಿದ್ದಾರೆ. ಅಲ್ಲದೆ ಈ ಬಹುತೇಕ ಜನರ ಉಸಿರಾಗಿದ್ದಾರೆ. ಅವರನ್ನು ಸ್ಮರಣೆ ಮಾಡೋದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ. ಹೀಗಿದ್ದು ಡಾ. ಅಂಬೇಡ್ಕರ್ ಅವರ ಹೆಸರನ್ನು ಶೋಕಿಗಾಗಿ ಹೇಳಲಾಗುತ್ತಿದೆ. ಅದರ ಬದಲು ದೇವರ ಹೆಸರು ಹೇಳಿದರೆ ಏಳು ಜನ್ಮಕ್ಕೆ ಪುಣ್ಯಪ್ರಾಪ್ತಿಯಾಗುತ್ತಿತ್ತು ಎಂದು ಕಲ್ಪನಾತೀತವಾಗಿ ಮತ್ತು ಬೇಜವಾಬ್ದಾರಿತನದಿಂದ ಹೇಳಿರುವ ಅಮಿತ್ ಶಾ ಮಾತು ದೇಶ ವಿರೋಧಿ ಕೃತ್ಯವಾಗಿದೆ. ಹೀಗಾಗಿ ಅವರು ದೇಶವಾಸಿಗಳಿಗೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು. ಪ್ರಧಾನಿ ಮೋದಿಯವರೂ ರಾಜೀನಾಮೆ ನೀಡಬೇಕು. ರಾಷ್ಟ್ರಪತಿಗಳು ಅವರನ್ನು ವಜಗೊಳಿಸಬೇಕು. ಇಲ್ಲವಾದಲ್ಲಿ ಸಮಿತಿಯು ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಕೈಗರತ್ತಿಕೊಳ್ಳಬೇಕಾಗುತ್ತದೆ” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಅಪಮಾನ; ಎಸ್‌ಡಿಪಿಐ ತೀವ್ರ ಖಂಡನೆ
ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರುಗಳಾದ ಸಿದ್ದು ರಾಯಣ್ಣನವರು, ವೈ ಸಿ ಮಯೂರ, ಮಹಾಂತೇಶ ಸಾಹಸಬಾಳ, ಬಾಬುರಾವ್ ಗುಡಿಮನಿ ಸೇರಿದಂತೆ ಇತರರು ಇದ್ದರು.