87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ‘ಅಕ್ಷರ ಹಬ್ಬ’ಕ್ಕೆ ತೆರೆ

Date:

Advertisements

ಮಂಡ್ಯದಲ್ಲಿ ಡಿಸೆಂಬರ್‌ 20ರಿಂದ ಆರಂಭಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಇಂದು(ಡಿ.22) ಸಮಾರೋಪಗೊಂಡಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜನಸಾಗರವೇ ಹರಿದು ಬಂದಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ನೂರಾರು ಅತಿಥಿಗಳು, ಸಾವಿರಾರು ಕನ್ನಡಾಭಿಮಾನಿಗಳು ಬಂದಿದ್ದರು. ಇದು ನಮ್ಮ ಕನ್ನಡ ನಾಡು, ನುಡಿಯ ಬಗ್ಗೆ ಜನರಿಗಿರುವ ಪ್ರೀತಿ, ಅಭಿಮಾನಕ್ಕೆ ಸಾಕ್ಷಿಯಾಯಿತು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಶ್ರೀ ಸಿದ್ಧಗಂಗಾಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಅವರ ಸಾನಿಧ್ಯದಲ್ಲಿ ಸಮಾರೋಪ ಸಮಾರಂಭ ಜರುಗಿತು.

ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಅತ್ಯಂತ ಅಪ್ಪಟ ಕನ್ನಡ ಭಾಷೆ ಉಳಿದಿದ್ದರೆ ಅದು ಮಂಡ್ಯ ಜಿಲ್ಲೆಯಲ್ಲಿ ಮಾತ್ರ. ಹಲವು ಸಾಹಿತ್ಯಾಸಕ್ತರು ಸಮ್ಮೇಳನದಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಭಾಷೆಗೆ ಶಕ್ತಿ ತುಂಬುವ ವಿಚಾರ ಗೋಷ್ಠಿ ನಡೆಸಲಾಗಿದೆ. ನಾನು ಕೇಂದ್ರದ ಮಂತ್ರಿ ಆಗಿ ಇಲ್ಲಿ ನಿಂತಿಲ್ಲ. ನಾಡಿನ ಅಪ್ಪಟ ಕನ್ನಡಿಗನಾಗಿ ಭಾವನೆ ವ್ಯಕ್ತಪಡಿಸಲು ಬಂದಿದ್ದೇನೆ ಎಂದರು.

Advertisements
20 1

“ನಮ್ಮ ಗ್ರಾಮೀಣ ಪ್ರದೇಶದ ಯುವಕರಿಗೆ ಒಂದು ಸವಾಲಿದೆ. ಒಂದೆಡೆ ಭಾಷೆಗೆ ಪ್ರಾಶಸ್ತ್ಯ ಕೊಡಬೇಕು. ಪ್ರತಿಯೊಂದು ಹಂತದಲ್ಲೂ ನಮ್ಮ ಭಾಷೆ ಮೇಲೆ, ಬೇರೆ ಭಾಷೆಗಳ ಹೇರಿಕೆ ಆಗ್ತಿದೆ. ಪಬ್ಲಿಕ್ ಶಾಲೆಗಳ ಬಗ್ಗೆ ಕೆಲವರು ಕಳವಳ ವ್ಯಕ್ತಪಡಿಸಿದ್ದಾರೆ. ನಾನು ಎರಡನೇ ಬಾರಿಗೆ ಸಿಎಂ ಆದಾಗ ಗ್ರಾಮೀಣ ಮಕ್ಕಳ ಸಮಸ್ಯೆ ಬಗ್ಗೆ ಗಮನಹರಿಸಿದ್ದೆ. ಸರ್ಕಾರಿ ಶಾಲೆಗೆ ಮಕ್ಕಳನ್ನ ಕಳಿಸಲು ಪೋಷಕರು ಆಸಕ್ತಿ ಕಳೆದುಕೊಂಡಿದ್ದಾರೆ. ಕಡಿಮೆ ವೆಚ್ಚದಲ್ಲಿ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಬೇಕು ನಿಜ. ಆದರೆ ನಮ್ಮ ಭಾಷೆ ಕಡೆಗಣನೆ ಸಲ್ಲದು” ಎಂದರು.

“ದೆಹಲಿಯಲ್ಲಿ ದೊಡ್ಡ ಮಟ್ಟದ ಸಾಹಿತ್ಯ ಸಮ್ಮೇಳನ ಮಾಡಬೇಕು. ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಈ ಬಗ್ಗೆ ಗಮನಹರಿಸಬೇಕು. ರಾಜ್ಯ ಸರ್ಕಾರದ ಸಹಕಾರದ ಜೊತೆಗೆ ಅಲ್ಲೂ ಸಮ್ಮೇಳನ ಮಾಡೋಣ” ಎಂದರು.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಎಚ್ಚರಿಕೆ ನೀಡಿದ ಬಸವರಾಜ ಹೊರಟ್ಟಿ!

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, “ಮಂಡ್ಯದ ಜನತೆ ಕನ್ನಡವನ್ನು ಉಳಿಸಿಕೊಂಡಿದ್ದಾರೆ. ಹಾಗಾಗಿ, ಬಂದಿದ್ದೇನೆ. ಸರ್ಕಾರವು ಕೋಟಿಗಟ್ಟಲೆ ದುಡ್ಡು ಸುರಿಸಿ, ಇಂತಹ ಬೃಹತ್ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಆದರೆ, ಸಮ್ಮೇಳನದಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಪೂರಕವಾಗಿ ಕಸಾಪ ಶ್ರಮಿಸುತ್ತಿಲ್ಲ” ಎಂದು ಬೇಸರ ಹೊರಹಾಕಿದರು.

ಹೊರಟ್ಟಿ 3

“ಮಂಡ್ಯದ 87ನೇ ಅಖಿಲ ಭಾರತ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಮತ್ತು ತೆಗೆದುಕೊಂಡ ಕ್ರಮಗಳ ಬಗ್ಗೆ ಬಳ್ಳಾರಿಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟವಾಗಿ ಮತ್ತು ಖಚಿತವಾದ ಮಾಹಿತಿ ನೀಡಬೇಕು. ತಿಳಿಸದೇ ಇದ್ದಲ್ಲಿ ನಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಿಮ್ಮ ವಿರುದ್ಧವೇ ಮಾತನಾಡುತ್ತೇನೆ. ಇದು ನನ್ನ ಸ್ಪಷ್ಟ ನಿಲುವು. ಜೋಶಿಯವರೇ, ಇದು ನಿಮ್ಮ ಜವಾಬ್ದಾರಿ” ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ವೇದಿಕೆಯಲ್ಲೇ ಬಹಿರಂಗ ಎಚ್ಚರಿಕೆ ನೀಡಿದರು.

ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಮಾತನಾಡಿ, “ಮೂರು ದಿನದ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ. ಅಚ್ಚುಕಟ್ಟಾಗಿ ಸಮ್ಮೇಳನ ನಡೆದಿದೆ. ಇತಿಹಾಸದಲ್ಲಿ ನಮಗೆ ಸಿಕ್ಕಿರೋ ಬಹುದೊಡ್ಡ ಆಸ್ತಿ ಭಾಷೆ. ಈ ಭಾಷೆಯಿಂದ ನಾವು ಸೃಷ್ಟಿಯ ಬೇರೆ ಜೀವಿಗಳಿಗಿಂತ ವಿಭಿನ್ನವಾಗಿದ್ದೇವೆ. ಭಾಷೆಯನ್ನ ಬೆಳೆಸಬೇಕು ಅಂದ್ರೆ ಮೊದಲು ಬಳಸಬೇಕು. ಡಿಜಿಟಲ್ ಯುಗದಲ್ಲೂ ಕನ್ನಡ ಬಳಕೆ ಆಗಬೇಕು. ಕುವೆಂಪು ಆಶಯದಂತೆ ಕನ್ನಡ ಭಾಷೆ, ಭಾವನೆ ಬೆಸೆಯಬೇಕು” ಎಂದರು.

470468225 122125465106572798 2195879163402212000 n

ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಕುರಿತ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷರಾದ ಡಾ.ಗೊ.ರು.ಚನ್ನಬಸಪ್ಪ, ವಿನಯ ಗುರೂಜಿ, ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ, ಕರ್ನಾಟಕ ವಿಧಾನ ಪರಿಷತ್ ಸನ್ಮಾನ್ಯ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಪಿ.ರವಿಕುಮಾರ್ ಗಣಿಗ, ಪಿ.ಎಂ.ನರೇಂದ್ರ ಸ್ವಾಮಿ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ.ಮಹೇಶ ಜೋಶಿ, ಜಿಲ್ಲಾ ಸಂಚಾಲಕರಾದ ಡಾ.ಮೀರಾ ಶಿವಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಐದು ನಿರ್ಣಯಗಳು ಅಂಗೀಕಾರ

ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರಮುಖ ಐದು ನಿರ್ಣಯಗಳೊಂದಿಗೆ ಸಮಾರೋಪಗೊಂಡಿತು.

ಸಮ್ಮೇಳನದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ನಿರ್ಣಯ ಮಂಡನೆ ಮಾಡಿದರು. ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹಾಗೂ ಸಾಹಿತ್ಯಾಭಿಮಾನಿಗಳು ನಿರ್ಣಯ ಅಂಗೀಕರಿಸಿದರು.

ನಿರ್ಣಯಗಳು ಹೀಗಿದೆ:

1. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ರ ಎಲ್ಲಾ ಉಪ-ಬಂಧಗಳು ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಸಮಗ್ರವಾಗಿ ಜಾರಿಗೆ ಬರಬೇಕಿದ್ದು, ಕೂಡಲೇ ಅನುಷ್ಠಾನವಾಗಬೇಕು. ಸ್ವಾಯತ್ತತೆ ಹೊಂದಿರುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರನ್ನು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಸೂಕ್ತ ತಿದ್ದುಪಡಿ ತರಬೇಕು.

2. ರಾಜ್ಯದಲ್ಲಿರುವ ಸರಕಾರದ ಎಲ್ಲ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿದಂತೆ ಇತರೆ ಮೂಲ ಸೌಕರ್ಯಗಳನ್ನು ಒದಗಿಸುವ ಮತ್ತು ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಯ ಕ್ರಮಕ್ಕೆ ಸರಕಾರ ತ್ವರಿತ ಕ್ರಮ ಕೈಗೊಳ್ಳಬೇಕು.

3. ಕನ್ನಡ ಅನ್ನದ ಭಾಷೆಯಾಗಲು ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸರಕಾರ ಸಮರ್ಪಕವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿಯನ್ನು ಶಾಸನಬದ್ಧಗೊಳಿಸಿ, ಅನುಷ್ಠಾನಗೊಳಿಸಬೇಕು.

4. ದಾವಣಗೆರೆಯಲ್ಲಿ ನಡೆಯಬೇಕಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಅತಿ ಶೀಘ್ರದಲ್ಲಿ ನಡೆಸಬೇಕು.

5. ರಾಜ್ಯ ಸರಕಾರವು ರಾಷ್ಟ್ರಕವಿಯನ್ನು ಅತಿ ಶೀಘ್ರದಲ್ಲಿ ಘೋಷಿಸಬೇಕು.

ಪುಸ್ತಕ ಮಳಿಗೆಗಳಲ್ಲಿ ಜನವೋ ಜನ

ಪುಸ್ತಕ ಪ್ರದರ್ಶನ, ವಾಣಿಜ್ಯ ಮಳಿಗೆಗಳು ಜನರಿಂದ ತುಂಬಿ ತುಳುಕಿತ್ತು. ಊಟೋಪಚಾರವೂ ನಿರಂತರವಾಗಿ ನಡೆಯುತ್ತಿತ್ತು. ಇದಕ್ಕಾಗಿ ಸುಮಾರು 1000 ಸಾವಿರದಷ್ಟು ಜನರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜೊತೆಗೆ, ಮಂಡ್ಯದ ಬಾಡೂಟವನ್ನು ಸಾಹಿತ್ಯ ಸಮ್ಮೇಳನದಲ್ಲಿ ನೀಡದಿದ್ದಕ್ಕೆ ಪ್ರತಿರೋಧವಾಗಿ ಜನಪರ ಸಂಘಟನೆಗಳ ಮುಖಂಡರು, ಚಿಕನ್ ಸಾರು, ಮೊಟ್ಟೆ, ರಾಗಿ ಮುದ್ದೆ ಇರುವ ಬಾಡೂಟವನ್ನು ಕೂಡ ಹಂಚುವ ಮೂಲಕ ಹೊಸ ಕ್ರಾಂತಿಗೆ ನಾಂದಿ ಹಾಡಿದರು.

26

ಪ್ರತಿದಿನ ಸಂಜೆ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಂಡ್ಯ ಮಾತ್ರವಲ್ಲದೇ ಸುತ್ತಮುತ್ತಲಿನ ಜನರೆಲ್ಲರೂ ಪ್ರವಾಹದಂತೆ ಹರಿದುಬಂದಿದ್ದರು. ಸಾಗರೋಪಾದಿಯಲ್ಲಿ ಬರುತ್ತಿದ್ದರು. ಬೀದಿ ವ್ಯಾಪಾರಿಗಳು, ತಿಂಡಿ ತಿನಿಸು, ಜ್ಯೂಸ್‌ ಅಂಗಡಿಗಳು ಸಮ್ಮೇಳನದ ಮುಖ್ಯದ್ವಾರದಿಂದಲೇ ಸ್ವಾಗತಿಸುತ್ತಿತ್ತು.

37

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಮ್ಮೇಳನದ ಮೂರು ವೇದಿಕೆಗಳ ಹೊರಭಾಗದ ವಿಶಾಲ ಅಂಗಣದಲ್ಲಿ ವಿವಿಧ ವಸ್ತುಗಳನ್ನು ಮಾರುವವರು ಮತ್ತು ಮಳಿಗೆಗಳಲ್ಲಿ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡುತ್ತಿರುವವರ ದಂಡೇ ನೆರೆದಿತ್ತು.

ಇದನ್ನು ಓದಿದ್ದೀರಾ? ಮಂಡ್ಯ ಸಾಹಿತ್ಯ ಸಮ್ಮೇಳನ | ಹೋರಾಟಕ್ಕೆ ಕೊನೆಗೂ ಮಣಿದ ಕಸಾಪ: ಸಾರ್ವಜನಿಕರಿಗೆ ಮೊಟ್ಟೆ ವಿತರಣೆ

ವೇದಿಕೆಯ ಹಿಂಭಾಗದಲ್ಲಿ ಮಾಡಲಾಗಿದ್ದ ‘ಮಾಧ್ಯಮ ಕೇಂದ್ರ’ದಲ್ಲಿ ಪತ್ರಿಕೆ, ವಿದ್ಯುನ್ಮಾನ, ಡಿಜಿಟಲ್ ಮೀಡಿಯಾ, ಫೋಟೋಗ್ರಾಫರ್ಸ್‌ ಸೇರಿದಂತೆ ಎಲ್ಲ ಪತ್ರಕರ್ತರು, ತಮ್ಮ ತಮ್ಮ ಕೆಲಸಗಳಲ್ಲಿ ‘ಬ್ಯುಝಿ’ಯಾಗಿದ್ದರು.

WhatsApp Image 2024 12 22 at 7.14.30 PM

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ್ಯತೆಯನ್ನು ಹಿರಿಯ ಸಾಹಿತಿ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ(ಗೊರುಚ) ವಹಿಸಿದ್ದರು. ಮುಂದಿನ ಸಮ್ಮೇಳನ ಗಣಿ ನಾಡು ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸಮಾರೋಪದ ವೇಳೆ ಘೋಷಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಬಾರಿಗೆ ಮೈಸೂರು ಪೊಲೀಸ್ ಬ್ಯಾಂಡ್ ಭಾಗವಹಿಸಿತ್ತು. ಸಮ್ಮೇಳನದ ಅಂತಿಮ ದಿನವಾದ ಇಂದು ಪೊಲೀಸ್ ಬ್ಯಾಂಡ್ ನೀಡಿದ ಪ್ರದರ್ಶನವನ್ನು ಜನತೆ ಕಣ್ತುಂಬಿಕೊಂಡರು.

ಬಾನದ

ಗಮನ ಸೆಳೆದ ದೀಪಾಲಂಕಾರ

ಮಂಡ್ಯದಲ್ಲಿ ಇಂದು ಮುಕ್ತಾಯ ಕಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಸಮ್ಮೇಳನ ನಡೆದ ಸ್ಥಳ ಹಾಗೂ ಮಂಡ್ಯ ನಗರದಲ್ಲಿ ಮಾಡಲಾಗಿದ್ದ ದೀಪಾಲಂಕಾರ ಜನರ ಗಮನ ಸೆಳೆಯಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X