ಸಿ ಟಿ ರವಿಗೆ ಸ್ವಾಗತಿಸಿದ್ದ 7 ಆ್ಯಂಬುಲೆನ್ಸ್​ ವಿರುದ್ಧ ಎಫ್‌ಐಆರ್

Date:

Advertisements

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರು ಚಿಕ್ಕಮಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದು, ಈ ವೇಳೆ ಆ್ಯಂಬುಲೆನ್ಸ್​ಗಳನ್ನು ಬಳಕೆ ಮಾಡಲಾಗಿದೆ.

ಸಿ ಟಿ ರವಿ ಸ್ವಾಗತಕ್ಕೆ ಆ್ಯಂಬುಲೆನ್ಸ್​ಗಳು ಸೈರನ್ ಹಾಕಿಕೊಂಡು ಬಂದಿವೆ. ಈ ಸಂಬಂಧ ಎಫ್​ಐಆರ್ ದಾಖಲಾಗಿದೆ. ಕೈಮರದಿಂದ ಸೈರನ್ ಹಾಕಿಕೊಂಡು ಬಂದಿದ್ದ 7 ಆ್ಯಂಬುಲೆನ್ಸ್ ಮೇಲೆ ಈಗ ಪ್ರಕರಣ ದಾಖಲಾಗಿದೆ.

ರೋಗಿಗಳಲ್ಲಿದೆ ಸೈರನ್ ಹಾಕಿಕೊಂಡು ಹಾಗೂ ಟಾಪ್​ನಲ್ಲಿ ಲೈಟ್ ಹಾಕಿಕೊಂಡು ಬಂದಿದ್ದ 7 ಆ್ಯಂಬ್ಯುಲೆನ್ಸ್ ಚಾಲಕ, ಮಾಲೀಕರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಶಾಂತಿ ಭಂಗ ಆರೋಪದಡಿ ಆ್ಯಂಬುಲೆನ್ಸ್ ಮಾಲೀಕ, ಚಾಲಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಬಂಧನದಿಂದ ಮುಕ್ತವಾದ ಬಳಿಕ ಸಿ ಟಿ ರವಿ ಅವರು ನಿನ್ನೆ(ಡಿಸೆಂಬರ್ 21) ಮಧ್ಯರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು, ಅವರ ಅಭಿಮಾನಿಗಳು ಸಿ ಟಿ ರವಿ ಅವರನ್ನು ಭರ್ಜರಿ ಸ್ವಾಗತ ಕೋರಿದ್ದರು. ರಸ್ತೆಯುದ್ದಕ್ಕೂ ಜೈಕಾರ ಹಾಕಿ ಹೂಮಳೆಗೈದಿದ್ದರು.ಇನ್ನು ಈ ಸ್ವಾಗತದ ಮೆರವಣಿಗೆಯಲ್ಲಿ 7 ಆ್ಯಂಬುಲೆನ್ಸ್​ಗಳು ಭಾಗಿಯಾಗಿದ್ದವು. ಚಿಕ್ಕಮಗಳೂರು ನಗರದ ಹಿರೇಮಗಳೂರಿನಿಂದ ಸಿ ಟಿ ರವಿ ನಿವಾಸದವರೆಗೂ ಜೋರಾಗಿ ಸೈರನ್ ಹಾಕಿಕೊಂಡು ಬಂದಿದ್ದವು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದ ಆರೋಪದ ಮೇಲೆ ಸಿ ಟಿ ರವಿ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಹೈಕೋರ್ಟ್​ ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X