ಮಂಡ್ಯದಲ್ಲಿ ಭಾನುವಾರ ಮುಕ್ತಾಯಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.
“ಮಂಡ್ಯದ ಸಮ್ಮೇಳನದಲ್ಲಿ ಕನ್ನಡದ ಬೆಳವಣಿಗೆಗೆ ಪ್ರಮುಖ ಐದು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಸಮ್ಮೇಳನದಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಅನುಷ್ಠಾನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ನೆಲ, ಜಲ, ಭಾಷೆ ಉಳಿವಿಗೆ ನಮ್ಮ ಸರ್ಕಾರ ಸದಾ ಬದ್ಧವಿದೆ” ಎಂದರು.
ಇದನ್ನು ಓದಿದ್ದೀರಾ? ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: ಫೋಟೋ ಆಲ್ಬಮ್
“ಕಳೆದ ಮೂರು ದಿನಗಳಲ್ಲಿ 6 ಲಕ್ಷಕ್ಕೂ ಅಧಿಕ ಜನರು ಸಮ್ಮೇಳನಕ್ಕೆ ಆಗಮಿಸಿದ್ದಾರೆ. ಇದಲ್ಲದೇ, 18 ದೇಶಗಳಿಂದ 200ಕ್ಕೂ ಅಧಿಕ ಕನ್ನಡ ಪ್ರೇಮಿಗಳು ಆಗಮಿಸಿದ್ದು ವಿಶೇಷ. ಸಮ್ಮೇಳನಾಧ್ಯಕ್ಷರ ಆಯ್ಕೆ, ಗೋಷ್ಠಿ, ಕಾರ್ಯಕ್ರಮಗಳು ಜನರ ಮೆಚ್ಚುಗೆ ಗಳಿಸಿವೆ” ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.
