ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದೆ.
ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ ನಕಲಿ ಒಬಿಸಿ ಪ್ರಮಾಣಪತ್ರವನ್ನು ಮಾಡಿಸಿಕೊಂಡಿದ್ದ ಆರೋಪ ಅವರ ಮೇಲಿದೆ.
ಈ ಸಂಬಂಧ ಅವರು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಆಕೆಯ ಉದ್ದೇಶಗಳು ಅಧಿಕಾರಿಗಳನ್ನು ವಂಚಿಸುವುದಾಗಿತ್ತು. ಅವಳ ನಿರ್ಧಾರ ದೊಡ್ಡ ಪಿತೂರಿಯ ಭಾಗವಾಗಿತ್ತು ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್
ಆಕೆಯ ವಿರುದ್ಧದ ಆರೋಪಗಳು ಅಧಿಕಾರಿಗಳಿಗೆ ಮಾತ್ರವಲ್ಲದೆ, ರಾಷ್ಟ್ರದ ದೊಡ್ಡ ವಂಚನೆಗೆ ಉದಾಹರಣೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕಳೆದ ತಿಂಗಳು ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಆಕೆಯ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ನಡೆದಿದ್ದ ಪ್ರಾಥಮಿಕ ತನಿಖೆ ವೇಳೆ ಆಕೆ ತಪ್ಪಿತಸ್ಥೆ ಎಂದು ಕಂಡುಬಂದಿತ್ತು. ಇದಾದ ಬಳಿಕ ಕೇಂದ್ರ ಸರ್ಕಾರ ಅವರನ್ನು ಹುದ್ದೆಯಿಂದ ವಜಾಗೊಳಿಸಿತ್ತು.
