ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ 161(ಎಂ)ರಲ್ಲಿ ಸೋಮವಾರ ಬೆಳಗ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಹೆದ್ದಾರಿಯ ಜೀರ್ಗಾ(ಬಿ) ಗ್ರಾಮ ಸಮೀಪ ಘಟನೆ ಅಪಘಾತ ಸಂಭವಿಸಿದ್ದು, ಜೀರ್ಗಾ (ಬಿ) ಗ್ರಾಮದ ಲಕ್ಷ್ಮಿಬಾಯಿ ಬಂಬುಳಗೆ(70) ಮೃತರು.
ರಸ್ತೆ ದಾಟುತ್ತಿದ್ದ ವೇಳೆ ಔರಾದ್ ಕಡೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಹಾಗೂ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು ಬ್ರಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಬೈಕ್ ಸವಾರನನ್ನು ಹೈದರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಹೆದ್ದಾರಿಯಲ್ಲಿ ಡಿ.4 ರಂದು ಕಾರು ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ, ಡಿ.13 ರಂದು ಮುಸ್ತಾಪುರ ಗ್ರಾಮದ ಸಮೀಪ ಕಾರು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದ್ದರು.