ಸಂಸತ್ ಸದನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಅಮಿತಾ ಶಾ ವಿರುದ್ಧ ಧಿಕ್ಕಾರ ಕೂಗಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | 22 ವರ್ಷಗಳ ಬಳಿಕ ಮಕ್ಕಳೊಂದಿಗೆ ಸೇರಿಕೊಂಡ ವೃದ್ಧ
ಜಿಲ್ಲಾಧ್ಯಕ್ಷ ಗುಂಡು ತಳವಾರ ಮಾತನಾಡಿ, “ಅಮಿತ್ ಶಾ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಿದ್ದಾಂತಗಳು ದಲಿತ ವಿರೋಧಿಯಾಗಿವೆ. ಇದೀಗ ಅಮಿತ್ ಶಾ ದಲಿತ ವಿರೋಧಿ ಹೇಳಿಕೆ ನೀಡಿರುವುದರಿಂದ ದೇಶದ ಜನರ ಎದುರು ಮಂಡಿಯೂರಿ ಕ್ಷಮೆಯಾಚನೆ ಮಾಡಬೇಕು. ಇಲ್ಲದಿದ್ದರೆ ಬಿಜೆಪಿಯವರಿಗೆ ಭೀಮಾ ಕೊರೆಗಾಂವ್ ಹೋರಾಟವನ್ನು ನೆನಪಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.