ಮುಂಬೈನಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ 70 ವರ್ಷದ ವ್ಯಕ್ತಿಯೋರ್ವರನ್ನು ಸುಮಾರು 33 ವರ್ಷಗಳ ಬಳಿಕ ಬಂಧಿಸಲಾಗಿದೆ.
ಬಾಬು ಕುಡ್ರಿರಾಮ್ ಕಳೆ ಎಂಬ ವ್ಯಕ್ತಿ ಮೇಲೆ ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪವಿದೆ. ಈ ಆರೋಪ ಕೇಳಿ ಬರುತ್ತಿದ್ದಂತೆ ಬಾಬು ಸುಮಾರು ಮೂರು ದಶಕಕ್ಕೂ ಅಧಿಕ ಕಾಲದಿಂದ ತಲೆಮರೆಸಿಕೊಂಡಿದ್ದರು.
ಇದನ್ನು ಓದಿದ್ದೀರಾ? ಬೆಳಗಾವಿ | ಆಸ್ತಿಗಾಗಿ ಜಗಳ: ತಮ್ಮನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೈದ ಸಹೋದರ
ಭಾನುವಾರ ಮುಂಬೈನ ಮುಲುಂದ್ ಸಮೀಪದಲ್ಲಿ ಪತ್ತೆಯಾಗಿದ್ದಾರೆ. ಬಾನು ಸುಮಾರು 30 ವರ್ಷದಿಂದ ಕಾರ್ಮಿಕರಾಗಿದ್ದರು, ಹೂವು ಮಾರಾಟ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.
ಬಾಬು ತನ್ನ ಪತ್ನಿಗೆ ಬೆಂಕಿ ಹಚ್ಚಿದ್ದರು ಎಂದು ಹೇಳಲಾಗಿದೆ. ಪತ್ನಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾಗ ಬಾಬು ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿತ್ತು. ಹಾಗೆಯೇ 1991ರ ಜನವರಿ 28ರಂದು ಬಂಧಿಸಲಾಗಿತ್ತು. ಆದರೆ ಪತ್ನಿ ಸಾವಿನ ಬಳಿಕ ಕೊಲೆ ಪ್ರಕರಣ ದಾಖಲಿಸಲಾಗಿತ್ತು.
ಅಷ್ಟರಲ್ಲೇ ಜಾಮೀನಿನ ಮೇಲೆ ಹೊರಬಂದ ಬಾಬು ಹಲವು ವರ್ಷಗಳಿಂದ ನಾಪತ್ತೆಯಾಗಿದ್ದು ಇತ್ತೀಚೆಗೆ ಮ್ಯಾಜಿಸ್ಟ್ರೇಟ್ ಬಂಧನ ವಾರೆಂಟ್ ಹೊರಡಿಸಿದೆ.
