ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (BSWT) ವತಿಯಿಂದ 2024ನೆ ಸಾಲಿನ “BSWT ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಯಕ್ರಮವು ಡಿ.25ರಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಆಕೀಫ್ ಇಂಜಿನಿಯರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆಯ ಮೂಲಕ ಮಾಹಿತಿ ನೀಡಿರುವ ಅವರು, ಡಿ.25ರಂದು ಅಪರಾಹ್ನ 3 ಗಂಟೆಗೆ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆಯ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಎಸ್, ಡಾ. ಪಿ ದಯಾನಂದ ಪೈ, ಪಿ.ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಯಕಾರ ಭಂಡಾರಿ, ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ಡೈರೆಕ್ಟೊರೇಟ್ ಎಕ್ಸ್ಟೆನ್ಷನ್ ಆಂಡ್ ಔಟ್ ರೀಚ್ ಆಕ್ಟಿವಿಟಿ ಇದರ ಡೈರೆಕ್ಟರ್ ಆಗಿರುವ ಡಾ. ಅಶ್ವಿನಿ ಎಸ್ ಶೆಟ್ಟಿ, ಎ.ಜೆ ಆಸ್ಪತ್ರೆಯಲ್ಲಿ ಗೈನೋಕಾಲಜಿಸ್ಟ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ವೀಣಾ ಕೆ.ಆರ್ ಭಾಗ್ವಾನ್, ಮಂಗಳ ಗಂಗೋತ್ರಿ ಇಲ್ಲಿನ ನಿವೃತ್ತ ಸೂಪರಿಂಟೆಂಡೆಂಟ್ ಹರೀಶ್ ಕುಮಾರ್ ಕುತ್ತಡ್ಕ, ಖದೀಜ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಅಶ್ರಫ್ ಎಂ.ಸಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ ವಹಿಸಿದ ರಾಜ್ಯ ಸರ್ಕಾರ: ಉಳಿಯಿತು 10,700 ಎಕರೆ ‘ದೇವರ ಸ್ವತ್ತು’

ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಈಶ್ವರ್ (ಕೆ.ಎ.ಎಸ್) ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್‌ನ ಚೇರ್‌ಮೆನ್ ಎನ್ ಅಮೀನ್ ಅಧ್ಯಕ್ಷತೆ ವಹಿಸಲಿದ್ದಾರೆ. ಚಿಲ್ಡ್ರನ್ಸ್ ವಿಥ್ ಡ್ರೀಮ್ಸ್ ಇದರ ಸ್ಥಾಪಕಿಯಾಗಿರುವ ರೂಪಾ ಬಲ್ಲಾಳ್ ಉಡುಪಿ ಅವರಿಗೆ ಈ ಸಂದರ್ಭದಲ್ಲಿ ‘ಬಿಎಸ್‌ಡಬ್ಲ್ಯೂಟಿ ವರ್ಷದ ವ್ಯಕ್ತಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು’ ಹಾಗೂ ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು ಎಂದು ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಇದರ ಕಾರ್ಯದರ್ಶಿ ಆಕೀಫ್ ಇಂಜಿನಿಯರ್ ತಿಳಿಸಿದ್ದಾರೆ.
