ಮಂಡ್ಯ | ರೈಲಿನಲ್ಲಿ ಮೂರ್ಛೆ ರೋಗಿ ಸಾವು; ರೈಲ್ವೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

Date:

Advertisements

ರೈಲ್ವೆ ಸಿಬ್ಬಂದಿ ಮತ್ತು ಪೊಲೀಸರ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ರೈಲಿನಲ್ಲೆ ಮೂರ್ಛೆ ರೋಗಿಯೊಬ್ಬರು ನರಳಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ( 83) ಮೃತ ವ್ಯಕ್ತಿ. ನಿನ್ನೆ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಅವರು ಪ್ರಯಾಣಿಸುತ್ತಿದ್ದರು. ಮೈಸೂರಿನಲ್ಲಿ ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದರು. ಸಹ ಪ್ರಯಾಣಿಕರಿಂದ ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು.

‌ರೋಗಿಯ ಮಾಹಿತಿ ಕೊಟ್ಟರೂ ಸಿಬ್ಬಂದಿಗಳು ಚಿಕಿತ್ಸೆ ಕೊಡಿಸಿರಲಿಲ್ಲ. ಮೈಸೂರಿನಲ್ಲಿ ಮೂರ್ಛೆ ರೋಗಿಯನ್ನು ಇಳಿಸಲೂ ಸಿಬ್ಬಂದಿ ಮುಂದಾಗಿರಲಿಲ್ಲ. ಮೈಸೂರಿನಿಂದ ಮಂಡ್ಯದವರೆಗೂ ಎಲ್ಲಿಯೂ ಚಿಕಿತ್ಸೆ ಸಿಕ್ಕಿರಲಿಲ್ಲ. ಹೀಗಾಗಿ ರೈಲು ಮಂಡ್ಯ ಸಮೀಪ ಬರುತ್ತಿದ್ದಂತೆ ಸ್ವಾಮಿ ಸಾವಿಗೀಡಾಗಿದ್ದಾರೆ ಎಂದು ಸಹಪ್ರಯಾಣಿಕರು ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆರ್‌ಟಿಐ ಕಾರ್ಯಕರ್ತ ಸಾವು ಪ್ರಕರಣ; ಇಬ್ಬರು ಪೊಲೀಸರು ಅಮಾನತು

ರೈಲಿನ ಎಲ್ಲ ನಿಲ್ದಾಣಗಳಲ್ಲಿ ರೈಲ್ವೆ ಪೊಲೀಸರಿಗೆ ತಿಳಿಸಿದರೂ ಚಿಕಿತ್ಸೆ ಕೊಡಿಸಲಿಲ್ಲ. ಮೂರ್ಛೆ ರೋಗಿ ಸಾವಿಗೆ ರೈಲ್ವೆ ಅಧಿಕಾರಿಗಳು, ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಸಹ ಪ್ರಯಾಣಿಕರು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೊಲೀಸರು ವಾರಸುದಾರರಿಗೆ ಒಪ್ಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X