2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಅಂತಿಮವಾಗಿ ಬಿಡುಗಡೆ ಮಾಡಿದೆ. ಫೆಬ್ರವರಿ 19 ರಿಂದ ಟೂರ್ನಿ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ. ಮಾರ್ಚ್ 9 ರಂದು ಫೈನಲ್ ನಡೆಯಲಿದೆ. ಟೀಂ ಇಂಡಿಯಾ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಈ ಟೂರ್ನಿಯು ಫೆಬ್ರವರಿ 19 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ. ಮಾರ್ಚ್ 9 ರಂದು ಫೈನಲ್ ನಡೆಯಲಿದೆ. ಟೀಂ ಇಂಡಿಯಾ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಇದಲ್ಲದೆ ಇಡೀ ಟೂರ್ನಿಯ ಹೈವೋಲ್ಟೇಜ್ ಪಂದ್ಯವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಆರ್ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್ ಕ್ರಿಕೆಟಿಗನಾದ ಕತೆ
- ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳಿದ್ದರೆ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ಬಿ ಗುಂಪಿನಲ್ಲಿವೆ.
- ಭಾರತ ತಂಡ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ತಂಡ ಫೈನಲ್ ತಲುಪಿದರೆ ಅದು ಕೂಡ ಲಾಹೋರ್ ಬದಲು ದುಬೈನಲ್ಲೇ ನಡೆಯಲಿದೆ.
- ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಮಾರ್ಚ್ 9 ರಂದು ಫೈನಲ್ ನಡೆಯದಿದ್ದರೆ, ಮಾರ್ಚ್ 10 ರಂದು ಪಂದ್ಯ ನಡೆಯಲಿದೆ.
- ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಯಾವುದೇ ಮೀಸಲು ದಿನವನ್ನು ಇರಿಸಲಾಗಿಲ್ಲ.
- ಚಾಂಪಿಯನ್ಸ್ ಟ್ರೋಫಿಯ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿವೆ.

