18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ 350 ಅಡಿ ಆಳದ ಕಣಿವೆಗೆ ಉರುಳಿ ಐವರು ಸೈನಿಕರು ಮೃತಪಟ್ಟ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಲ್ನೋಯಿ ಪ್ರದೇಶದಲ್ಲಿ ನಡೆದಿದೆ.
ಮೆಂಧಾರ್ನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನಡೆದ ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರ ಪೈಕಿ ಹಲವು ಸೈನಿಕರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹವಾಮಾನ ವೈಪರೀತ್ಯ, ಸಾಮೂಹಿಕ ವಲಸೆ ಮತ್ತು ಅಭಿವೃದ್ಧಿ ಮಂತ್ರ
ಜಮ್ಮು ಮತ್ತು ಕಾಶ್ಮೀರದಲ್ಲಿನ ಕಡಿದಾದ, ಪರ್ವತಮಯ ಭೂಪ್ರದೇಶದ ಕಾರಣದಿಂದಾಗಿ ಕಾರುಗಳು ಮತ್ತು ಇತರ ವಾಹನಗಳು ಕಣಿವೆ ಉರುಳುವುದು ಸಾಮಾನ್ಯ. ಆದರೆ ಇಂದು ನಡೆದ ಘಟನೆಗೆ ನಿಜವಾದ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.
ಪರಿಹಾರ ಕಾರ್ಯಾಚರಣೆ ನಡೆಯುತ್ತಿದ್ದು, ಸೇನೆಯ ತುರ್ತು ಕಾರ್ಯ ಪಡೆ ಹಾಗೂ ಪೊಲೀಸರು ಆಗಮಿಸಿದ್ದಾರೆ.
ಕಳೆದ ತಿಂಗಳು ಕೂಡ ಇದೇ ರೀತಿ ಅಪಘಾತ ಸಂಭವಿಸಿ ಓರ್ವ ಸೈನಿಕ ಮೃತಪಟ್ಟು,ಒಬ್ಬರು ಸಿಬ್ಬಂದಿ ಗಾಯಗೊಂಡಿದ್ದರು.
