ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪಾಠಗಳಿಗೆ ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ

Date:

Advertisements
  • ಸಾಹಿತಿ ಬರಹಗಾರರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
  • ಕಾನೂನು ಕೈಗೆತ್ತಿಕೊಂಡು ಪುಂಡಾಟ ನಡೆಸಿದರೆ ತಕ್ಕ ಕಾನೂನು ಶಾಸ್ತಿ

ಕನ್ನಡ ನಾಡಿನ ಸೌಹಾರ್ಧ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುಮಾರು 40ಕ್ಕೂ ಹೆಚ್ಚು ಮಂದಿ ಸಾಹಿತಿ, ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಈ ಭರವಸೆ ನೀಡಿದರು.

ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ, ಈ‌ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಅಭಿನಂದನೆ ಸಲ್ಲಿಸಿ ಭರವಸೆ ನೀಡಿದರು.

Advertisements

ಈ ಸುದ್ದಿಓದಿದ್ದೀರಾ? ಸಮಾನ ಮನಸ್ಕರ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯ ಭೇಟಿ; ಸಮಾನ ಶಿಕ್ಷಣ ಜಾರಿಗೆ ಒತ್ತಾಯ

ಮುಖ್ಯಮಂತ್ರಿ ಭರವಸೆಗಳು

  • ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ.
  • ಕನ್ನಡ ಹೋರಾಟಗಾರರು, ರೈತ, ಕಾರ್ಮಿಕ ಮತ್ತು ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು.
  • ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರವಾದ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು.
  • ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ.
  • ಉಳಿದಂತೆ ಸಾಹಿತಿ ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಗತ್ಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X