ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ನೀಡಿದರು.
“ಪ್ರೊ. ರಾಜು ಕೆ ಆರ್ ಅವರು ಉತ್ತಮ ಪ್ರಾಧ್ಯಾಪಕ, ಉಪನ್ಯಾಸಕರಾಗಿದ್ದು, ಕಾಲೇಜಿನಲ್ಲಿ ಅತ್ಯಂತ ನಿಷ್ಠೆಯಿಂದ ಪಾಠ ಮಾಡುತ್ತಿದ್ದಾರೆ. ಯಾರದೇ , ತಂಟೆಗೆ ಹೋಗದೆ ತಮ್ಮಷ್ಟಕ್ಕೆ ತಾವು ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿ ದುಡಿಯುತ್ತಿದ್ದಾರೆ. ಅಂತಹ ಉಪನ್ಯಾಸಕರ ಮೇಲೆ ಹಲ್ಲೆ ಮಾಡಿರುವುದು ಅತ್ಯಂತ ಖಂಡನೀಯ. ಹಾಗಾಗಿ ಹಲ್ಲೆ ಮಾಡಿರುವ ತಂದೆ ಮತ್ತು ಮಗನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಲಾಗಿದೆ.
ಕಾಲೇಜಿನ ಎದುರು ಉಪವಿಭಾಗಾಧಿಕಾರಿ ಯತೀಶ್ ಆರ್ ಮನವಿ ಸ್ವೀಕರಿಸಿ ಮಾತನಾಡಿ, “ಪ್ರಾಧ್ಯಾಪಕ ರಾಜು ಅವರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಹಲ್ಲೆಗೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.
ಈ ಸುದ್ದಿ ಓದಿದ್ದೀರಾ?
ಪ್ರತಿಭಟನೆಯಲ್ಲಿ ಮಧುಚಂದ್ರ, ರಕ್ಷಿತ್, ಶ್ರೇಯಸ್, ಯೋಗೇಶ್, ಶೈಲಜ, ವೈಷ್ಣವಿ, ಧನ್ಯ ಡಿ, ಪವನಕುಮಾರ್, ಗಜೇಂದ್ರ, ನಿಖಿಲ್, ಮಧು ಎಂ ಬಿ, ಭೂಮಿಕಾ ಸೇರಿದಂತೆ ಇತರರು ಇದ್ದರು.
ವರದಿ : ಅಮಿತ್ ಆರ್, ಆನಂದಪುರ