ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರು, ಸೇರಿದಂತೆ ರಾಜ್ಯದ ಹಲವು ನಗರದಲ್ಲಿ ಚಳಿ ಅಧಿಕವಾಗಿರುತ್ತದೆ. ಆದರೆ ಈ ವರ್ಷ ಚಳಿ ಕೊಂಚ ಕಡಿಮೆಯಿದೆ. ಆದರೆ ಆಗಾಗ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದಲ್ಲಿ ಗಾಳಿಯ ವೇಗ ಅಧಿಕವಾಗಲಿದೆ. ಗುಡುಗು ಸಹಿತ ಮಳೆಯಾಗಿದೆ. ಚೆನ್ನೈ, ಒಡಿಶಾ, ಕರ್ನಾಟಕದಲ್ಲಿ ಮಳಯಾಗಲಿದೆ ಎಂದು ತಿಳಿಸಿದೆ.
ಇಂದು ಹತ್ತು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಯಚೂರು, ಯಾದಗಿರಿ, ಕೆೊಪ್ಪಳ, ಕಲಬುರಗಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.
ಇದನ್ನು ಓದಿದ್ದೀರಾ? ಕರ್ನಾಟಕದ 12 ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ
ಇದನ್ನು ಹೊರತುಪಡಿಸಿ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆ (ಡಿಸೆಂಬರ್ 26) ಒಟ್ಟು 13 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಬಾಗಲಕೋಟೆ, ಕೆೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಡಿಸೆಂಬರ್ 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಹೆೊರತುಪಡಿಸಿ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
