ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಲ್ನೋಯಿ ಪ್ರದೇಶದಲ್ಲಿ ನಿನ್ನೆ (ಡಿಸೆಂಬರ್ 24) ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರು ಯೋಧರ ಪೈಕಿ ಮೂವರು ಕನ್ನಡಿಗರು ಎಂದು ವರದಿಯಾಗಿದೆ.
ಮೃತ ಮೂವರು ಯೋಧರನ್ನು ಬೆಳಗಾವಿ ಜಿಲ್ಲೆಯ ಸಾಂಬ್ರಾ ಗ್ರಾಮದ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರದ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮತ್ತು ಮಹಾಲಿಂಗಪುರದ ಮಹೇಶ್ ಮರಿಗೊಂಡ (25) ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | 350 ಅಡಿ ಕಣಿವೆಗೆ ಉರುಳಿದ ಸೇನಾ ವಾಹನ: ಐವರು ಸೈನಿಕರು ಸಾವು, ಹಲವರಿಗೆ ಗಾಯ
18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ 350 ಅಡಿ ಆಳದ ಕಣಿವೆಗೆ ಉರುಳಿದ್ದು, ಐವರು ಯೋಧರು ಸಾವನ್ನಪ್ಪಿದ್ದಾರೆ. ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ಜಮ್ಮು ಕಾಶ್ಮೀರದ ಪೂಂಚ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
— Siddaramaiah (@siddaramaiah) December 25, 2024
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ದೇಶ ಸೇವೆಗಾಗಿ ಜೀವ… pic.twitter.com/K5mDBIn8sS
“ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ” ಎಂದು ತಿಳಿಸಿದ್ದಾರೆ.
