- ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್
- ಭರ್ಜರಿ ವರ್ಗಾವಣೆ ನಡೆಸಿದ ರಾಜ್ಯ ಸರ್ಕಾರ
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ್ ನೇಮಕವಾಗಿದ್ದಾರೆ. ಈ ಹಿಂದಿದ್ದ ಆಯುಕ್ತ ಪ್ರತಾಪ್ ರೆಡ್ಡಿ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ, ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಮೊದಲ ವರ್ಗಾವಣೆ ಇದಾಗಿದೆ. ಉಳಿದಂತೆ ಟ್ರಾಫಿಕ್ ಕಮಿಷನರ್ ಆಗಿದ್ದ ಎಂ ಎ ಸಲೀಂ ಅವರನ್ನು ಸಿಐಡಿ ಡಿಜಿಪಿ (ಕ್ರಿಮಿನಲ್ ತನಿಖೆ) ಆಗಿಯೂ, ಕ್ರಿಮಿನಲ್ ಇನ್ವೆಸ್ಟಿಗೇಷನ್ ಎಡಿಜಿ ಆಗಿದ್ದ ಶರತ್ ಚಂದ್ರ ಅವರನ್ನು ಎಡಿಜಿಪಿ ಗುಪ್ತಚರ ಇಲಾಖೆಗೆ ವರ್ಗಾಯಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? : ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪಾಠಗಳಿಗೆ ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ