ಬೆಳಗಾವಿ | ಅಪಘಾತದಲ್ಲಿ ಮೃತಪಟ್ಟ ಯೋಧರಿಗೆ ಸಿಎಂ ಅಂತಿಮ ಗೌರವ, ಸರ್ಕಾರದಿಂದ ನೆರವು ಘೋಷಣೆ

Date:

Advertisements

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

Advertisements

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

ನಾಲ್ಕು ಮಂದಿ ಯೋಧರು

ದಯಾನಂದ ತಿರುಕಣ್ಣನವರ್ ಬೆಳಗಾವಿ
ಧನರಾಜ್ ಸುಭಾಷ್ ಚಿಕ್ಕೋಡಿ
ಮಹೇಶ್ ನಾಗಪ್ಪ ಬಾಗಲಕೋಟೆ
ಅನೂಪ್ ಪೂಜಾರಿ ಕುಂದಾಪುರ

ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ

ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಬೆಳಗಾವಿ : ವೇದಗಂಗಾ–ಘಟಪ್ರಭಾ ನದಿಗಳ ಅಬ್ಬರನಿಪ್ಪಾಣಿ – ಗೋಕಾಕ್ ಪ್ರದೇಶದಲ್ಲಿ ಪ್ರವಾಹದಿಂದ ಹಾನಿ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X