ಉಡುಪಿ | ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆ ಖಂಡಿಸಿ ರೋಗಿಗಳ ಪ್ರತಿಭಟನೆ

Date:

Advertisements
  • ಸಂಜೀವಿನಿ ಎಂಬ ಖಾಸಗಿ ಸಂಸ್ಥೆ ನಿರ್ವಹಣೆಯಲ್ಲಿರುವ ಡಯಾಲಿಸಿಸ್‌ ಕೇಂದ್ರ
  • ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ, ಡಯಾಲೀಸ್ ಕೇಂದ್ರ ಪರಿಶೀಲನೆ

ಉಡುಪಿ ಜಿಲ್ಲಾ ಆಸ್ಪತ್ರೆಯ ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆಯ ವಿರೋಧಿಸಿ ಡಯಾಲಿಸಿಸ್‌ ರೋಗಿಗಳು ಆಸ್ಪತ್ರೆ ಬಳಿ ದಿಢೀರ್ ಪ್ರತಿಭಟನೆ ನಡೆಸಿದರು.

ಡಯಾಲಿಸಿಸ್‌ ಕೇಂದ್ರವನ್ನು ಗುತ್ತಿಗೆ ಪಡೆದಿರುವ ಎಸ್ಕಗ್ ಸಂಜೀವಿನಿ ಸಂಸ್ಥೆಯ ನಿರ್ವಹಣೆ ಕಳಪೆಯಾಗಿದ್ದು, ವ್ಯವಸ್ಥಿತವಾಗಿ ಯಾವುದೂ ನಡೆಯುತ್ತಿಲ್ಲ. ಈ ಸಂಸ್ಥೆಗೆ ಜಿಲ್ಲಾಸ್ಪತ್ರೆ ಆಡಳಿತ ಮಂಡಳಿ ಡಯಾಲಿಸಿಸ್‌ ಕೇಂದ್ರವನ್ನು ಬಿಟ್ಟು ಕೊಡುವಾಗ ಒಟ್ಟು 14 ಡಯಾಲಿಸಿಸ್‌ ಯಂತ್ರಗಳಿದ್ದವು. ಅವುಗಳ ಪೈಕಿ ಪ್ರಸ್ತುತ ಏಳು ಯಂತ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದವು ಹಾಳಾಗಿದ್ದು, ಅದನ್ನು ದುರಸ್ತಿ ಕೂಡ ಮಾಡಿಲ್ಲ. ಅವ್ಯವಸ್ಥೆಯಿಂದ ಕಳೆದ ಒಂದು ವರ್ಷಗಳಲ್ಲಿ ಅಂದಾಜು 30 ರೋಗಿಗಳು ಮೃತಪಟ್ಟಿದ್ದಾರೆ ಎಂದು ಧರಣಿನಿರತರು ಆರೋಪಿಸಿದ್ದಾರೆ.

ಈಗ ಈ ಕೇಂದ್ರದಲ್ಲಿ ಒಟ್ಟು 60 ರೋಗಿಗಳು ಡಯಾಲಿಸಿಸ್‌ ಮಾಡಿಸುತ್ತಿದ್ದಾರೆ. ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ರೋಗಿಗಳು ಜಿಲ್ಲಾ ಸರ್ಜನ್, ಜಿಲ್ಲಾಧಿಕಾರಿ, ಶಾಸಕರುಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

Advertisements

ಡಯಾಲೀಸಿಸ್ ಗೆ ಸಂಬಂಧಿಸಿ ತುಂಬಾ ಸಮಸ್ಯೆ ಇದೆ. ಸರಿಯಾಗಿ ಕ್ಲೀನ್ ಆಗುತ್ತಿಲ್ಲ. ಡಯಾಲೀಸಿಸ್ ಮಾಡಿದ ನಂತ ಚಳಿ, ವಾಂತಿ ಆಗುತ್ತದೆ. ನಾವು ಪ್ರಶ್ನೆ ಮಾಡಿದರೆ ನಮಗೆ ಉಡಾಫೆಯಿಂದ ಮಾತನಾಡುತ್ತಾರೆ. ಸಿಬ್ಬಂದಿಗಳಿಲ್ಲದೆ ಸಮಯಕ್ಕೆ ಸರಿಯಾಗಿ ಡಯಾಲೀಸ್ ಆಗುತ್ತಿಲ್ಲ. ಅವರು ಏನು ಮಾಡಿದರೂ ನಾವು ಕೇಳಬೇಕು. ಯಾಕೆಂದರೆ ನಾವು ಉಚಿತವಾಗಿ ಮಾಡುವವರು ಎಂಬ ನಿರ್ಲಕ್ಷತನ ಅವರಲ್ಲಿದೆ. ಆದುದರಿಂದ ಸರ್ಕಾರ ಕೂಡಲೇ ಹೊಸ ಯಂತ್ರ ಅಳವಡಿಸಿ ಸರಿಯಾದ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಸೂಚನೆ

ಉಡುಪಿ ಜಿಲ್ಲಾಸ್ಪತ್ರೆಯ ಡಯಾಲೀಸಿಸ್ ರೋಗಿಗಳ ಧರಣಿಯ ಹಿನ್ನೆಲೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಡಯಾಲೀಸ್ ಕೇಂದ್ರವನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಸಂಬಂಧ ಶಾಸಕರು ಜಿಲ್ಲಾ ಸರ್ಜನ್ ಡಾ. ಸುದೇಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಧರಣಿನಿರತ ರೋಗಿಗಳನ್ನು ಸಂತೈಸಿದ ಅವರು, ಇಲ್ಲಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X