ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಾ.ಬಿ.ಆರ್. ಅಂಬೇಡ್ಕರ್ ಹೋರಾಟ ಸಮಿತಿಯಿಂದ ನಾಳೆ (ಡಿ.27)ರಂದು ಔರಾದ್ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಝರೆಪ್ಪ ನಾಗಮಾರಪಳ್ಳಿ ತಿಳಿಸಿದ್ದಾರೆ.
ಔರಾದ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ʼರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಕುರಿತು ಕೀಳಾಗಿ ಮಾತನಾಡಿದ್ದು ಇಡೀ ಭಾರತೀಯರಿಗೆ ನೋವು ತಂದಿದೆ. ಕೂಡಲೇ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದುʼ ಎಂದು ಹೇಳಿದರು.
ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕರು, ಅಂಬೇಡ್ಕರ್ ಅನುಯಾಯಿಗಳು ಸ್ವಯಂ ಪ್ರೇರಣೆಯಿಂದ ಬಂದ್‌ಗೆ ಬೆಂಬಲ ನೀಡಲಿದ್ದಾರೆ. ಎಂದರು.
ಸಭೆಯಲ್ಲಿ ಪ್ರಮುಖರಾದ ಗೌತಮ್ ಮೇತ್ರೆ, ತಾನಾಜಿ ತೋರಣೆಕರ್, ದತ್ತಾತ್ರಿ ಮುಂಗನಾಳ, ಸುಭಾಷ ಲಾಧಾ, ರತ್ನದೀಪ ಕಸ್ತೂರೆ, ಶಿವು ಕಾಂಬಳೆ, ಅಖಿಲೇಶ, ತುಕರಾಮ ಹಸನ್ಮುಖಿ, ಗಣಪತಿ ವಾಸುದೇವ, ಸುನೀಲ ಮಿತ್ರಾ, ಶಾಂತಕುಮಾರ್ ಭಾವಿಕಟ್ಟಿ, ದಿನೇಶ ಸಿಂಧೆ, ಉತ್ತಮ, ಪ್ರವೀಣ ಕಾರಂಜೆ, ಸಂತೋಷ ಸಿಂಧೆ, ಸಂತೋಷ ಸೂರ್ಯವಂಶಿ, ಆನಂದ ಕಾಂಬಳೆ ಸೇರಿದಂತೆ ಅನೇಕರು ಹಾಜರಿದ್ದರು.