ಹೊಸ ಸರ್ಕಾರದ ಯಾವುದೇ ತನಿಖೆಗೂ ನಾವು ಸಿದ್ಧ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Date:

Advertisements
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹಗರಣದ ಬಗ್ಗೆ ತನಿಖೆಗೆ ಸಿಎಂ ಆದೇಶ
  • ತನಿಖೆ ಪಾರದರ್ಶಕವಾಗಿರಲಿ, ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು: ಬೊಮ್ಮಾಯಿ

ಹೊಸ ಸರ್ಕಾರ ನಮ್ಮ ಬಗ್ಗೆ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ಧ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, “ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

“ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಇರಲಿ. ಯಾವುದೇ ತನಿಖೆ ಮಾಡಬಹುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಅಂತ ನಾನೇ ಹಿಂದೆ ದೂರು ನೀಡಿದ್ದೆ. ಚುನಾವಣಾ ನೀತಿ ಸಂಹಿತೆ ಇದ್ದ ಹಿನ್ನೆಲೆ ಎಫ್‌ಐಆರ್ ಆಗಿರಲಿಲ್ಲ. ತನಿಖೆ ಪಾರದರ್ಶಕವಾಗಿರಲಿ. ತನಿಖೆ ಕಾಮಗಾರಿಗೆ ಅಡ್ಡಿ ಆಗದಿರಲಿ. ಟಾರ್ಗೆಟ್ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಆಗಬಾರದು” ಎಂದರು.

Advertisements

ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, “ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರದ ಮೇಲೆ ಕೆಲವು ಹೊಸದಾಗಿ ಪಠ್ಯಗಳನ್ನು ಪರಿಚಯ ಮಾಡಿದ್ದೆವು. ಅವರು ಅದೇ ಜಾಡನ್ನು ಹಿಡಿದು ಹೊಸ ಸಮಿತಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸುತ್ತಿದ್ದಾರೆ. ಪಠ್ಯ ಪದೇ ಪದೆ ಬದಲಾವಣೆಯಿಂದ ಮಕ್ಕಳಿಗೆ ಸಮಸ್ಯೆ ಆಗಬಾರದು. ಜವಾಬ್ದಾರಿಯುತ ಸರ್ಕಾರ ಏನು ಮಾಡಲಿದೆ ನೋಡೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಗ್ಯಾರಂಟಿ ಮತ್ತು ಉಳ್ಳವರ-ಉಂಡವರ ವಿಕೃತಿ

“ಎನ್.ಇ.ಪಿ ಮೂಲಕ ಈಗ ಮಕ್ಕಳು ಅಧ್ಯಯನ ಶುರು ಮಾಡಿದ್ದಾರೆ. ಎನ್.ಇ.ಪಿ ಮಾಡುವಾಗಲೇ ಸಮಿತಿ ಮಾಡಿ, ರಾಜ್ಯದ ಅಭಿಪ್ರಾಯ ತೆಗೆದುಕೊಳ್ಳಲಾಗಿದೆ. ಎಲ್ಲಾ ತಜ್ಞರ ಅಭಿಪ್ರಾಯ ಪಡೆದು ಎನ್.ಇ.ಪಿ ಜಾರಿಗೆ ತರಲಾಗಿದೆ” ಎಂದರು.

“ಉಚಿತ ಯೋಜನೆಗಳ ಬಗ್ಗೆ ನಿನ್ನೆ ಸಿಎಂ ಸಭೆ ಮಾಡಿದ್ದಾರೆ. ಸುದೀರ್ಘ ಸಭೆಯಲ್ಲಿ ಏನಾಗಿದೆ ಗೊತ್ತಿಲ್ಲ. ಎಲ್ಲ ಉಚಿತ ನೀಡಿದರೆ, ಅಭಿವೃದ್ಧಿ ಕಾರ್ಯ ಕುಂಠಿತ ಆಗಲಿದೆ. ಎಲ್ಲರಿಗೂ ಸಿಗುತ್ತದೆ ಅಂತ ಮೊದಲು ಆಶ್ವಾಸನೆ ನೀಡಿದ್ದಾರೆ. ಅತ್ತೆಗೋ, ಸೊಸೆಗೋ ಅಂತ ಮೊದಲು ಹೇಳಿರಲಿಲ್ಲ. ಏನು ಮಾಡಲಿದ್ದಾರೆ ಅಂತ ಕರ್ನಾಟಕದ ಜನತೆಗೆ ಕಾಡುತ್ತಿದೆ. ಒಂದನೇ ತಾರೀಖು ಕ್ಯಾಬಿನೆಟ್ ಇದೆ. ಅಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಆರ್ಥಿಕವಾಗಿ ಕಷ್ಟ ಅನ್ನುವುದು ಮೇಲ್ನೋಟಕ್ಕೇ ಗೊತ್ತಾಗುತ್ತಿದೆ. ಜನರನ್ನು ಯಾಮಾರಿಸಿ ಗೆಲ್ಲಬೇಕು ಅಂತ ಮಾಡಿದ್ದಾರೆ. ಜನ ಈಗ ಅಧಿಕಾರ ಕೊಟ್ಟಿದ್ದಾರೆ. ಏನು ಮಾಡುತ್ತಾರೆ ಕಾದು ನೋಡೋಣ” ಎಂದು ತಿಳಿಸಿದದರು.

“ಫ್ರೀ ಯೋಜನೆ ಘೋಷಣೆ ಜಾರಿ ಮಾಡದೆ ಇದ್ದರೆ ಕೆಲವರು ಕಾನೂನು ಹೋರಾಟ ಮಾಡಲಿದ್ದಾರೆ ಎನ್ನುವ ಎಚ್ಚರಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದವರೇ ಈ ರೀತಿ ಹೋರಾಟ ಮಾಡೋದಕ್ಕೆ ಹೇಳಿ, ಕೋರ್ಟ್ ನಲ್ಲಿ ಫ್ರೀ ಯೋಜನೆಗೆ ತಡೆ ತರುವ ತಂತ್ರ ಇದ್ದರೂ ಇರಬಹುದು. ಹೇಳಲಿಕ್ಕೆ ಆಗುವುದಿಲ್ಲ” ಎಂದು ಬಸವರಾಜ ಬೊಮ್ಮಾಯಿ‌ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X