ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆ?; 5 ರೂ. ಏರಿಕೆ ಸಾಧ್ಯತೆ!

Date:

Advertisements

ತನ್ನ ಮಾರುಕಟ್ಟೆಯನ್ನು ಹಿಗ್ಗಿಸಿಕೊಳ್ಳುತ್ತಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ನಂದಿನಿ ಬ್ರಾಂಡ್‌ ಅಡಿಯಲ್ಲಿ ದೋಸೆ, ಇಡ್ಲಿ ಹಿಟ್ಟುಗಳನ್ನೂ ಮಾರುಕಟ್ಟೆಗೆ ಬಿಟ್ಟಿದೆ. ಈ ನಡುವೆಯೇ, ನಂದಿನಿ ಹಾಲಿನ ದರವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಂದಾಗಿದೆ. ಹೊಸ ವರ್ಷದಿಂದ ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದೆ ಎಂದು ವರದಿಯಾಗಿದೆ.

ಆರು ತಿಂಗಳ ಹಿಂದೆ ಪ್ರತಿ ಲೀಟರ್ ನಂದಿನಿ ಹಾಲಿಗೆ 2 ರೂ. ಏರಿಕೆ ಮಾಡಲಾಗಿತ್ತು. ಇದೀಗ, ಮತ್ತೆ ದರ ಏರಿಕೆಗೆ ಕೆಎಂಎಫ್‌ ಮುಂದಾಗಿದೆ. ‘ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರವು ಬೆಲೆ ಏರಿಕೆ ಬಗ್ಗೆ ನಿರ್ಧಾರ ತೆಗೆದುಕೊಳುವುದು ಬಾಕಿ ಇದೆ’ ಎಂದು ಕೆಎಂಎಫ್‌ ಅಧ್ಯಕ್ಷ ಎಲ್‌. ಭೀಮಾನಾಯ್ಕ ತಿಳಿಸಿರುವುದಾಗಿ ವರದಿಯಾಗಿದೆ.

ಅಲ್ಲದೆ, ಈ ಹಿಂದೆ, ಹೆಚ್ಚುವರಿಯಾಗಿ ಒಂದು ಲೀಟರ್ ಹಾಲಿನ ಜೊತೆಗೆ 50 ಎಂಎಲ್‌ ಹಾಲನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿತ್ತು. ಈಗ, ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ ಹಾಲನ್ನು ಸ್ಥಗಿತಗೊಳಿಸಿ, 2 ರೂಪಾಯಿ ಕಡಿತಗೊಳಿಸುವ ಪ್ರಸ್ತಾಪವನ್ನೂ ಕೆಎಂಎಫ್‌ ಸರ್ಕಾರದ ಮುಂದಿಟಿದೆ ಎಂದು ತಿಳಿದುಬಂದಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X