ಔರಾದ ತಾಲ್ಲೂಕಿನ ಬೆಳಕುಣಿ(ಚೌ) – ಮುಂಗನಾಳ ಮಾರ್ಗವಾಗಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ಪೊಲೀಸ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬೈಕ್ ಮೇಲೆ ಚೀಲದಲ್ಲಿ ಗಾಂಜಾ ತರುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರಿಂದ ಅಂದಾಜು ₹5 ಲಕ್ಷ ಮೌಲ್ಯದ 5 ಕೆಜಿ ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಂಡಿದ್ದಾರೆ. ಬಂಧಿತ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಆನ್‌ಲೈನ್ ಗೇಮಿಂಗ್ : ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದೆ.