ರಾಯಚೂರು | ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ಹೆಚ್ಚಳ; ದೂರು ದಾಖಲಿಸಿಕೊಳ್ಳದ ಪೊಲೀಸರ ವಿರುದ್ಧ ಆರೋಪ

Date:

Advertisements

ರಾಯಚೂರು ನಗರದಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜತೆಗೆ ಮದ್ಯ ಮಾರಾಟ, ಜೂಜಾಟ, ಮಟ್ಕಾ ಚೀಟಿ ಹಾಗೂ ಮರಳು ಗಣಿಗಾರಿಕೆಯತಹ ಅಕ್ರಮಗಳು ಎಗ್ಗಿಲ್ಲದೇ ನಡೆಯುತ್ತಿದ್ದರೂ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಪುಟ್ಟಮಾದಯ್ಯ ಅವರಿಗೆ ಸಮುದಾಯದ ಮುಖಂಡರು ಅಹವಾಲು ಸಲ್ಲಿಸಿದರು.

ರಾಯಚೂರು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಎಸ್‌ಸಿ/ಎಸ್‌ಟಿ ಸಮುದಾಯಗಳ ಕುಂದು ಕೊರತೆ ಸಭೆಯಲ್ಲಿ ದಲಿತ ಮುಖಂಡರು ತಮ್ಮ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಎಸ್‌ಪಿ ಪುಟ್ಟಮಾದಯ್ಯ ಅವರಿಗೆ ಅಹವಾಲು ನೀಡಿದರು.

“ನಗರದ ಸ್ಲಂ ಪ್ರದೇಶಗಳಲ್ಲಿ ಸಿ ಎಚ್ ಪೌಡರ್ ಸೇಂದಿ ಮಾರಾಟ ನಡೆಯುತ್ತಿದೆ. ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಕೂಡಾ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ದಲಿತ ಮುಖಂಡರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

Advertisements
1000055203

“ಮರಳು ಸಾಗಣೆ ಮಾಡುವ ಟಿಪ್ಪರ್‌ಗಳು ಅಡ್ಡಾದಿಡ್ಡಿಯಾಗಿ ರಸ್ತೆಯಲ್ಲಿ ಓಡಾಡುತ್ತಿವೆ. ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವೇಳೆ ಬದಲಾವಣೆ ಮಾಡಿ ನಿರ್ಬಂಧ ಹೇರಬೇಕು. ಜಿಲ್ಲೆಯ ಹಲವೆಡೆ ಹೋಟೆಲ್, ದೇವಸ್ಥಾನಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಮಾಡಲಾಗುತ್ತಿದೆ. ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದ ಬಗ್ಗೆ ಹಲವು ಬಾರಿ ದೂರು ಸಲ್ಲಿಸಲಾಗಿದೆ. ಆದರೆ ಯಾವುದೇ ಕ್ರಮವಾಗಿಲ್ಲ. ತಾವಾದರೂ ಸೂಕ್ತ ಕ್ರಮ ವಹಿಸಬೇಕು” ಎಂದು ದಲಿತಪರ ಸಂಘಟನೆಗಳ ಮುಖಂಡರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನುವಾದ, ಫ್ಯಾಸಿಸ್ಟ್ ವಿರುದ್ಧ ಜ.1ರಂದು ಪ್ರತಿಭಟನೆ

ಈ ಸಂದರ್ಭದಲ್ಲಿ ಅಪರ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ್, ಹರೀಶ, ಡಿವೈಎಸ್‌ಪಿ ಸತ್ಯನಾರಾಯಣರಾವ್‌, ತಹಶೀಲ್ದಾ‌ರ್ ಸುರೇಶ್ ವರ್ಮಾ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದ, ಅರಣ್ಯ ಇಲಾಖೆ ಅಧಿಕಾರಿ ಪ್ರವೀಣ, ಅಬಕಾರಿ ಇಲಾಖೆಯ ಅಧಿಕಾರಿ, ಸಮುದಾಯದ ಮುಖಂಡರಾದ ಕೆ ಇ ಕುಮಾರ, ಹನುಮಂತಪ್ಪ ಕಾಕರಗಲ್, ಮಾರೆಪ್ಪ, ಎನ್ ಮಹಾವೀರ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X