ಸಂಸತ್ ಸದನದಲ್ಲಿ ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟದಿಂದ ಡಿಸೆಂಬರ್ 30ರ ಸೋಮವಾರದಂದು “ಕಂಪ್ಲಿ ಬಂದ್”ಗೆ ಕರೆ ನೀಡಲು ಪೂರ್ವಭಾವಿ ಸಭೆ ನಡೆಸಿದರು.
ಬಳ್ಳಾರಿ ಜಿಲ್ಲೆಯ ಕಂಪ್ಲಿ ಶಾರದಾ ಶಾಲಾ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಕಾರ್ಯಕರತರು ಮಾತನಾಡಿ, “ಡಾ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡನೀಯ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಇದೇ ತಿಂಗಳ 30ರಂದು ಕಂಪ್ಲಿ ಬಂದ್ಗೆ ಕರೆಕೊಡಲಾಗಿದೆ” ಎಂದರು.
“ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸಂಯಮದ ಜತೆಗೆ ಸಾಂಗಾತ್ರಯ ಪಾಠಶಾಲೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್ ಸರ್ಕಲ್ನಲ್ಲಿ ಸಚಿವರ ಪ್ರತಿಕೃತಿ ದಹಿಸಿಲಾಗುವುದು” ಎಂದು ಸಭೆಯಲ್ಲಿ ತೀರ್ಮಾನಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ್ ಬಂದ್ : ಬೆಳ್ಳಂ ಬೆಳಿಗ್ಗೆಯೇ ಆರಂಭವಾದ ಪ್ರತಿಭಟನೆ
ಸಭೆಯಲ್ಲಿ ರೈತ ಸಂಘಟನೆಗಳು, ಕಾರ್ಮಿಕ ಸಂಘಗಳು, ಮಹಿಳಾ ಸಂಘಗಳು, ಡಿಎಸ್ಎಸ್ ಸಂಘಟನೆ ಸೇರಿದಂತೆ ಅನೇಕ ಸಂಘಟನೆಗಳ ಬೆಂಬಲದೊಂದಿಗೆ ಸಂರಕ್ಷಣಾ ಮಹಾ ಒಕ್ಕೂಟದ ಸದಸ್ಯರು ಇದ್ದರು.