ದೇಶ ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದಾಗ ಸರಿದಾರಿಗೆ ತಂದವರು ಸಿಂಗ್‌: ಮಾಜಿ ಪ್ರಧಾನಿ ದೇವೇಗೌಡ ಗುಣಗಾನ

Date:

Advertisements

ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ಮರಿಸಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಮರ್ಪಣೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, “ಇದು ಅತ್ಯಂತ ದುಃಖದ ದಿನ. ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ನಾನು ಮನಮೋಹನ್ ಸಿಂಗ್ ಅವರನ್ನು ನೋಡಿದ್ದು 1991ರಲ್ಲಿ, ಲೋಕಸಭೆಯಲ್ಲಿ. ನಾನು ಕೂಡ ಮೊದಲ ಬಾರಿಗೆ ಲೋಕಸಭೆಗೆ ಹೋಗಿದ್ದೆ. ಅವರು ಪಿ.ವಿ.ನರಸಿಂಹ ರಾವ್ ಸರಕಾರದಲ್ಲಿ ಆರ್ಥಿಕ ಸಚಿವರಾಗಿದ್ದರು. ನಮ್ಮ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಅನೇಕ ಪ್ರಯತ್ನಗಳನ್ನು ಮಾಡಿದರು. ಆ ಸಂದರ್ಭದಲ್ಲಿ ಆರ್ಥಿಕವಾಗಿ ದೇಶದ ಸ್ಥಿತಿ ಬಹಳ ಹದಗೆಟ್ಟಿತ್ತು. ಅದಕ್ಕೂ ಹಿಂದೆ 130 ಟನ್ ಚಿನ್ನವನ್ನು ಒತ್ತೆ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಇತ್ತು. ಆ ಸನ್ನಿವೇಶದಲ್ಲಿ ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರು” ಎಂದು ನೆನಪು ಮಾಡಿಕೊಂಡರು.

“ಮನಮೋಹನ್ ಸಿಂಗ್ ಅವರನ್ನು ನಾನು ಬಹಳ ಟೀಕೆ ಮಾಡಿದ್ದೆ. ಅವರ ನೀತಿಗಳನ್ನು ಪ್ರಶ್ನೆ ಮಾಡಿದ್ದೆ. ಖಾಸಗೀಕರಣ, ವಿದೇಶದಿಂದ ಹಣ ಬರಲು ನಮ್ಮ ದೇಶದ ಆರ್ಥಿಕ ನೀತಿಗಳನ್ನು ಮಾರ್ಪಾಡು ಮಾಡಿ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದರು. ಇದು ಬಹಳ ದೊಡ್ಡ ಬೆಳವಣಿಗೆ. ಮನಮೋಹನ್ ಸಿಂಗ್ ಅವರು ಸರಳ ಸಜ್ಜನ ಪ್ರಾಮಾಣಿಕ ವ್ಯಕ್ತಿ ಆಗಿದ್ದವರು. ನಾವು ಪಕ್ಷ ರಾಜಕಾರಣವನ್ನು ಹೊರತುಪಡಿಸಿ ಅವರನ್ನು ನೆನೆಯುತ್ತಿದ್ದೇವೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ನಮ್ಮ ಪಕ್ಷದ ಪರವಾಗಿ, ವೈಯಕ್ತಿಕವಾಗಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ” ಎಂದರು.

Advertisements

“ನರಸಿಂಹರಾವ್ ಸರಕಾರದಲ್ಲಿ ಈ ದೇಶದ ಗೌರವ ಉಳಿಸಲು ಆರ್ಥಿಕ ತಜ್ಞರಾಗಿ ಮನಮೋಹನ್ ಸಿಂಗ್ ಅವರು ಸೇವೆ ಸಲ್ಲಿಸಿದ್ದರು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದೇಶವನ್ನು ಪಾರು ಮಾಡಿ ಗೌರವ ಉಳಿಸಿದ್ದು ಅವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಹೇಳುತ್ತ ಮಾಜಿ ಪ್ರಧಾನಿಗಳು ಗದ್ಗದಿತರಾದರು. ದೇಶಕ್ಕೆ ಮನಮೋಹನ್ ಸಿಂಗ್ ಅವರು ಸುಧೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಮುತ್ಸದಿ ರಾಜಕಾರಣಿ ಹಿರಿಯ ರಾಜಕಾರಣಿ 92 ವಯಸ್ಸಲ್ಲಿ ಅಗಲಿದ್ದಾರೆ. ವಯಕ್ತಿಕ ನನಗೆ ತುಂಬಾ ಬೇಸರವಾಗಿದೆ. ಅವರ ಆತ್ಮಕ್ಕೆ ಭಗವಂತ ಮೋಕ್ಷ ಕೊಡಲಿ, ಪರಮಾತ್ಮ ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ” ಎಂದು ಭಾವುಕರಾದರು.

“ದೇಶದಲ್ಲಿ ಯಾವುದೇ ಸರಕಾರಿ ಕಾರ್ಯಕ್ರಮ ಮಾಡಬಾರದು. ಶೋಕಾಚರಣೆ ಇದೆ. ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಕೊಡಬೇಕು. ಅವರು ನಮ್ಮ ದೇಶಕ್ಕೆ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ. ಮುತ್ಸದ್ದಿ ರಾಜಕಾರಣಿ ಹಿರಿಯ ರಾಜಕಾರಣಿ ತಮ್ಮ 92ನೇ ವಯಸ್ಸಿನಲ್ಲಿ ನಮ್ಮನ್ನೆಲ್ಲಾ ಅಗಲಿದ್ದಾರೆ. ಅವರು ಜಾರಿ ಮಾಡಿದ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳ ಮೂಲಕ ದೇಶಕ್ಕೆ ವಿದೇಶಿ ನೇರ ಬಂಡವಾಳ ದೊಡ್ಡ ಪ್ರಮಾಣದಲ್ಲಿ ಹರಿದು ಬಂತು. ಹಣಕಾಸು ಸಚಿವರಾಗಿ ಬರುವುದಕ್ಕೆ ಮೊದಲು ಅವರು ಜಾಗತಿಕ ಮಟ್ಟದಲ್ಲಿ ಕೆಲಸ ಮಾಡಿದ್ದರು. ಹೀಗಾಗಿ ಅಲ್ಲಿ ಬಹಳ ದೊಡ್ಡ ಅನುಭವ ಗಳಿಸಿಕೊಂಡರು. ಆರ್ಥಿಕ ವಿಚಾರದಲ್ಲಿ ಅವರು ತುಂಬಾ ಬುದ್ದಿವಂತರಾಗಿದ್ದರು” ಎಂದು ಸ್ಮರಿಸಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಲಿಂಗೇಶ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X