ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು: ಆರೋಪಪಟ್ಟಿ​ ಸಲ್ಲಿಕೆ

Date:

Advertisements

ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪಗಳಿಗೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡವು ಆರೋಪಪಟ್ಟಿಯನ್ನು ಸಲ್ಲಿಸಿದೆ.

ಅತ್ಯಾಚಾರ, ಜೀವ ಬೆದರಿಕೆ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಹರಡುವ ದುಷ್ಕೃತ್ಯದ ಆರೋಪಗಳನ್ನು ಸಿಐಡಿ ದೃಢಪಡಿಸಿದೆ. ಇನ್ಸ್‌ಪೆಕ್ಟರ್ ಬಿ. ಐಯ್ಯಣ್ಣ ರೆಡ್ಡಿ ಅವರನ್ನು ಬಂಧಿಸಲಾಗಿದೆ. 2481 ಪುಟಗಳ ಆರೋಪಪಟ್ಟಿಯಲ್ಲಿ 146 ಸಾಕ್ಷಿಗಳ ಹೇಳಿಕೆಗಳು ಮತ್ತು 850 ದಾಖಲೆಗಳಿವೆ.

ತಮ್ಮ ವಿರೋಧಿಗಳನ್ನು ಹೆಚ್​ಐವಿ-ಏಡ್ಸ್ ​​ಪೀಡಿತರ ಮೂಲಕ ಹನಿಟ್ರ್ಯಾಪ್​​ ಬಲಗೆ ಬೀಳಿಸಿ ಏಡ್ಸ್​​ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್​ಐಟಿ ಸಲ್ಲಿಸಿದ ಚಾರ್ಜ್​​​ಶೀಟ್​ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್​ಪೆಕ್ಟರ್​ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್​​ಪೆಕ್ಟರ್​​ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್​ಐಟಿ ಪೊಲೀಸರು ಬಂಧಿಸಿದ್ದಾರೆ.

Advertisements

ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್​​ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್​ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್​ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಎಸ್​ಐಟಿ ಸಲ್ಲಿಕೆ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿಸಿಟಿವಿ ಅಳವಡಿಸಿ, ಸೆಕ್ಯುರಿಟಿ ನೇಮಿಸಿದರಷ್ಟೇ ಮಹಿಳಾ ಸುರಕ್ಷತೆ ಸಾಧ್ಯವೇ?

376(2)ಎನ್ (ನಿರಂತರ ಅತ್ಯಾಚಾರ), 3081202 (ಅಪರಾಧಿಕ ಸಂಚು), 504 (ಉದ್ದೇಶ ಪೂರ್ವಕ ಅವಮಾನ), 506 (ಜೀವ ಬೆದರಿಕೆ), 270 (ಅಪಾಯಕಾರಿ ರೋಗ ಹರಡುವಿಕೆ. ಆರೋಪಿಗಳ ವಿರುದ್ಧ ಪ್ರಮುಖವಾಗಿ ಲೈಂಗಿಕ ಕಿರುಕುಳಕ್ಕಾಗಿ ಐಪಿಸಿ 354ಎ, ಅನುಮತಿ ಇಲ್ಲದೆ ಮಹಿಳೆ ಯ ಅಶ್ಲೀಲ ದೃಶ್ಯ ಸೆರೆಹಿಡಿದಿರುವುದಕ್ಕೆ ಸೆಕ್ಷನ್ 354 ಸಿ, ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಕ್ಕಾಗಿ ಐಪಿಸಿ ಸೆಕ್ಷನ್ 376 (2) (ಎನ್), ಸಂತ್ರಸ್ತೆಯ ಕೊಲ್ಲುವ ಉದ್ದೇಶಕ್ಕೆ ಸೆಕ್ಷನ್ 308, ಅಪರಾಧಿಕ ಒಳಸಂಚಿಗೆ ಸೆಕ್ಷನ್ 120 B, ಉದ್ದೇಶಪೂರ್ವಕವಾಗಿ ಅವಮಾನಕ್ಕಾಗಿ ಸೆಕ್ಷನ್ 504, ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯಕ್ಕಾಗಿ ಸೆಕ್ಷನ್ 270 ಮತ್ತು ವ್ಯಕ್ತಿಯ ಖಾಸಗಿ ಚಿತ್ರವನ್ನ ಒಪ್ಪಿಗೆಯಿಲ್ಲದೆ ಸೆರೆಹಿಡಿದಿದ್ದಕ್ಕೆ ಐಟಿ ಕಾಯ್ದೆ 2000ರ ಸೆಕ್ಷನ್ 66ಇ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್​ ಯತ್ನ ಸೇರಿ 4 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್​ಗೆ ಜಾತಿನಿಂದನೆ ಹಾಗೂ ಬಿಜೆಪಿ ಕಾರ್ಯಕರ್ತೆ ಮೇಲಿನ ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಿ ಸಿಐಡಿ ನವೆಂಬರ್​ 30ರಂದು ಚಾರ್ಜ್​ಶೀಟ್ ಸಲ್ಲಿಕ್ಕೆ ಮಾಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X