ಚಿಕ್ಕಬಳ್ಳಾಪುರ | ಸಿಲಿಂಡರ್‌ ಸ್ಫೋಟ, ಹೊತ್ತಿ ಉರಿದ ಲಾರಿಗಳು

Date:

Advertisements

ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ ಹಾಗೂ ಮಾದಪ್ಪ ಎಂಬವರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುನೇಗಲ್ ಬಳಿ ತಿರುವು ಪಡೆಯಲು ನಿಂತಿದ್ದ ಸಿಎನ್‍ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಕಲ್ಲು ದಿಮ್ಮಿಗಳನ್ನ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಸಿಎನ್‍ಜಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.

Advertisements

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಮಾಂತ್ರಿಕನಿಗೆ ಶ್ರದ್ಧಾಂಜಲಿ

ಘಟನೆಯಿಂದ ಹುನೇಗಲ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಹಾನಿಗೊಳಗಾದ ವಾಹನ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣದಲ್ಲಿ ಕೊಕೇನ್ ದಂಧೆ ಬಯಲು; ಬಾಗೇಪಲ್ಲಿ ಮೂಲದ ಆರೋಪಿ ಬಂಧನ

ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯದ ವಿವಿಧ ಕಡೆಗಳಲ್ಲಿ ಕೊಕೇನ್ ಮಾರಾಟ ದಂಧೆಯಲ್ಲಿ...

ಚಿಕ್ಕಬಳ್ಳಾಪುರ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘವು ರಾಜ್ಯವ್ಯಾಪ್ತಿ ಎಲ್ಲ...

ಚಿಂತಾಮಣಿ | ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಮುಖ್ಯ: ಆರ್ ವೆಂಕಟಾಚಲಪತಿ

ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ಹಾಗಾಗಿ...

ಚಿಂತಾಮಣಿ | ಹಿರಿಯ ನಾಗರಿಕರ ವಿವಿಧ ಸ್ಪರ್ಧೆಗಳಿಗೆ ಸಚಿವ ಡಾ. ಎಂ ಸಿ ಸುಧಾಕ‌ರ್ ಚಾಲನೆ

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಚಿವ...

Download Eedina App Android / iOS

X